Wednesday, July 6, 2022

Latest Posts

ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟ: ಕನಿಷ್ಠ ಹತ್ತು ಮಂದಿ ಸುಟ್ಟು ಭಸ್ಮ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಯೆಮನ್‌ನ ಏಡೆನ್ ವಿಮಾನ ನಿಲ್ದಾಣದಲ್ಲಿ ಬುಧವಾರ ಭಾರೀ ಸ್ಫೋಟವೊಂದು ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿ, 30 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಕ್ಯಾಬಿನೆಟ್ ಸದಸ್ಯರು ವಿಮಾನ ನಿಲ್ದಾಣದಿಂದ ಹೊರಗೆ ತೆರಳುತ್ತಿರುವ ಸಂದರ್ಭದಲ್ಲಿಯೇ ಈ ಸ್ಫೋಟ ಸಂಭವಿಸಿದೆ. ಪ್ರಾಥಮಿಕ ತನಿಖೆಗಳಲ್ಲಿ ಇರಾನ್ ಬೆಂಬಲಿತ ಆತ್ಮಾಹುತಿ ಬಂಡುಕೋರರು ನಡೆಸಿದ ದಾಳಿ ಇದಾಗಿದೆ ಎಂದು ಶಂಕಿಸಲಾಗಿದೆಯಾದರೂ, ಸ್ಫೋಟಕ್ಕೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss