ವಿರೋಧ ಪಕ್ಷಗಳಿಂದ ವೋಟ್ ಬ್ಯಾಂಕ್ ರಾಜಕಾರಣ: ಅಮಿತ್ ಶಾ ವಾಗ್ದಾಳಿ

0
205

ಹುಬ್ಬಳ್ಳಿ: ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ವಿರೋಧ ಪಕ್ಷಗಳು ತಪ್ಪು ಮಾಹಿತಿ ಬಿತ್ತುವ ಮೂಲಕ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದರು.

ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಆಯೋಜಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ಜನಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಭಾರತದ ನೆರೆ ರಾಷ್ಟ್ರಗಳಲ್ಲಿ ಅಲ್ಪಸಂಖ್ಯಾತರಾಗಿ ದೌರ್ಜನ್ಯಕ್ಕೊಳಗಾಗಿ ಇಲ್ಲಿಗೆ ಬಂದವರಿಗೆ ಪೌರತ್ವ ನೀಡುವುದಕ್ಕಾಗಿಯೇ ಈ ಕಾಯ್ದೆ ಜಾರಿಗೊಳಿಸಲಾಗಿದೆ. ಆದರೆ ವಿರೋಧ ಪಕ್ಷಗಳು ತಪ್ಪು ಮಾಹಿತಿ ರವನೆ ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸಿ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿವೆ ಎಂದರು.

ಪಾಕಿಸ್ತಾನದಿಂದ ಭಾರತಕ್ಕೆ ಬರುವ ಹಾಗೂ ಭಾರತದಿಂದ ಪಾಕಿಸ್ತಾನಕ್ಕೆ ಹೋಗುವ ಅಲ್ಪಸಂಖ್ಯಾತರಿಗೆ ನೆಲೆ ಮತ್ತು ಉದ್ಯೋಗ ಒದಗಿಸುವುದು ಎರಡು ದೇಶಗಳ ಕರ್ತವ್ಯ ಎಂದು ಅಂದಿನ ಪ್ರಧಾನಿ ನೆಹರು ತಿಳಿಸಿದ್ದರು. ಇಂದು ಭಾರತ ಆ ಕರ್ತವ್ಯವನ್ನು ಸರ್ಮಥವಾಗಿ ನಿಭಾಯಿಸಿದೆ ಎಂದು ತಿಳಿಸಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದ ಸಂದರ್ಭದಲ್ಲಿ ಪಾಕಿಸ್ತಾನದ ಭಯೋತ್ಪಾದಕರು ದೇಶದೊಳಗೆ ನುಸುಳಿ ನಮ್ಮ ಸೈನಿಕರನ್ನು ಹತ್ಯೆ ಮಾಡುತ್ತಿದ್ದರು. ಆಗ ಮೌನಿ ಬಾಬಾ ಮನಮೋಹನ್ ಸಿಂಗ್ ಏನು ಮಾಡಲಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ಆದರೆ, ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಪಾಕಿಸ್ತಾನದ ನೆಲಕ್ಕೆ ಹೋಗಿ ಅಲ್ಲಿನ ಭಯೋತ್ಪಾದಕರ ಹೆಡೆಮುರಿಕಟ್ಟಲು ಆದೇಶ ನೀಡಿದರು ಎಂದು ಏರ್​ಸ್ಟ್ರೈಕ್​ ಬಗ್ಗೆ ಹೇಳಿದರು.

LEAVE A REPLY

Please enter your comment!
Please enter your name here