Saturday, July 2, 2022

Latest Posts

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ: ಯಾದಗಿರಿಗೆ ಬಂದಿಳಿದ ಸಿಎಂ ಬಿಎಸ್’ವೈ

ಹೊಸದಿಗಂತ ವರದಿ,ಯಾದಗಿರಿ:

ಯಾದಗಿರಿಯಲ್ಲಿ ನೂತನ ಜಿಲ್ಲಾ ಆಸ್ಪತ್ರೆ ಉದ್ಘಾಟನೆ,ಯಿಮ್ಸ್ ಗೆ ಶಂಕುಸ್ಥಾಪನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಮಧ್ಯಾಹ್ನ ನಗರದ ಕ್ರೀಡಾಂಗಣಕ್ಕೆ ಬಂದಿಳಿದರು.

ಸಿಎಂ‌ ಅವರೊಂದಿಗೆ ಹೆಲಿಕಾಪ್ಟರ್ ನಲ್ಲಿ ಡಿಸಿಎಂ ಲಕ್ಷ್ಮಣ ‌ಸವದಿ, ಸಚಿವರಾದ ಡಾ.ಸುಧಾಕರ್, ಪ್ರಭು ಚವ್ಹಾಣ ಆಗಮಿಸಿದರು.

ಸಿಎಂ ಅವರಿಗೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯ ಅವರು ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ್, ಶಾಸಕರಾದ ವೆಂಕಟರೆಡ್ಡಿ ಮುದ್ನಾಳ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ನರಸಿಂಹ ನಾಯಕ(ರಾಜುಗೌಡ), ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರು ಸೇರಿದಂತೆ ಅನೇಕರು ಇದ್ದರು.

ನಂತರ ಸಿಎಂ ಯಡಿಯೂರಪ್ಪ ಅವರು ಗೌರವ ವಂದನೆ ಸ್ವೀಕರಿಸಿ ಕಾರ್ಯಕ್ರಮದ ಸ್ಥಳಕ್ಕೆ ತೆರಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss