Wednesday, August 10, 2022

Latest Posts

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ

ಚಿತ್ರದುರ್ಗ:

ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಕೊರೋನಾ ಎರಡನೇ ಅಲೆಗೆ ತತ್ತರಿಸಿದ್ದ ಕರ್ನಾಟಕ ಹಂತ ಹಂತವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಈಗಾಗಲೇ ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ತರಗತಿಗಳೆಲ್ಲವೂ ಮರು ಪ್ರಾರಂಭವಾಗಿ ವಿದ್ಯಾರ್ಥಿಗಳೆಲ್ಲ ಉತ್ಸಾಹದಿಂದ ಶಾಲಾ ಕಾಲೇಜುಗಳಿಗೆ ಬರುತ್ತಿರುವುದು ಸಂತೋಷದ ಸಂಗತಿ. ಆದರೆ ಭೌತಿಕ ತರಗತಿಗಳು ಆರಂಭಗೊಂಡ ಬಳಿಕ ವಿದ್ಯಾರ್ಥಿಗಳಿಗೆ ಕೆಲವೊಂದು ಸಮಸ್ಯೆಗಳು ಉಧ್ಬವಿಸುತ್ತಿರುವುದು ಶೋಚನಿಯ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲ ಗ್ರಾಮಗಳಿಗೂ ಬಸ್ ಸೇವೆ ಆರಂಭಿಸಬೇಕು. ಶಾಲಾ-ಕಾಲೇಜುಗಳು ಆರಂಭವಾಗಿ ವಿದ್ಯಾರ್ಥಿಗಳು ಕಲಿಕೆಯ ಕಡೆಗೆ ಉತ್ಸಾಹದಿಂದ ಗಮನ ಹರಿಸಿದ್ದಾರೆ. ಕೋವಿಡ್ ಕಾರಣಕ್ಕೆ ಬದಲಾದ ತರಗತಿಗಳ ಸಮಯಕ್ಕೆ ಹಾಜರಾಗಲು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ. ಲಾಕ್‌ಡೌನ್ ಕಾರಣಕ್ಕೆ ಸ್ಥಗಿತಗೊಂಡಿದ್ದ ಸಾರಿಗೆ ಸೇವೆ ಕೆಲ ಹಳ್ಳಿಗಳಲ್ಲಿ ಇನ್ನೂ ಪುನರಾರಂಭವಾಗಿಲ್ಲ. ಇದರಿಂದಾಗಿ ರಾಜ್ಯದ ಗ್ರಾಮೀಣ ಭಾಗದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸಾರಿಗೆ ಸಂಚಾರ ತೊಂದರೆಯಾಗಿ ಪರಿಣಮಿಸಿದೆ ಎಂದು ದೂರಿದರು.
ಸಾರಿಗೆ ಇಲಾಖೆಯು ತಕ್ಷಣವೇ ವಿದ್ಯಾರ್ಥಿಗಳ ಅವಶ್ಯಕತೆಗೆ ಅನುಗುಣವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್ ಸಂಚಾರ ಆರಂಭಿಸಬೇಕು. ವಿದ್ಯಾರ್ಥಿಗಳು ಬಸ್‌ಪಾಸ್ ಪಡೆಯಲು ಅರ್ಜಿ ಸಲ್ಲಿಸಿದರೂ ಸಹಿತ ಸಿಬ್ಬಂದಿಗಳ ಕೊರತೆಯಿಂದಾಗಿ ತಡವಾಗಿ ವಿದ್ಯಾರ್ಥಿಗಳಿಗೆ ಬಸ್‌ಪಾಸ್ ದೊರೆಯುತ್ತಿದೆ. ಈ ಸಮಸ್ಯೆಯನ್ನು ಸರಿಪಡಿಸಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ತಕ್ಷಣವೇ ಬಸ್‌ಪಾಸ್ ನೀಡುವ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿದರು.
ಡಿಪ್ಲೋಮಾ ಇಂಜಿನಿಯರಿಂಗ್, ಸ್ನಾತಕ, ಸ್ನಾತಕೋತ್ತರ ತರಗತಿಗಳಲ್ಲಿ ಮತ್ತು ಪಿ.ಎಚ್.ಡಿ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ಶಿ?ವೇತನ ಪಡೆಯದೇ ಪರದಾಡುವಂತಾಗಿದೆ. ರಾಜ್ಯ ಸರಕಾರ ಈ ಎಲ್ಲ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ವಿದ್ಯಾಸಿರಿ ಶಿ?ವೇತನ ಸೇರಿದಂತೆ ಎಲ್ಲಾ ವಿದ್ಯಾರ್ಥಿ ವೇತನವನ್ನು ಕೂಡಲೇ ಬಿಡುಗಡೆಗೊಳಿಸಬೇಕು. ವಿದ್ಯಾರ್ಥಿಗಳ ಅಧ್ಯಯನಕ್ಕೆ ಪ್ರೋತ್ಸಾಹಿಸಲು ವಿದ್ಯಾರ್ಥಿ ವೇತನದ ಮೊತ್ತ ಹೆಚ್ಚಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಹೊಸದಾಗಿ ಶಾಲಾ ಕಾಲೇಜಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ತರಗತಿಗಳು ಆರಂಭವಾಗಿವೆ. ಆದರೂ ವಿದ್ಯಾರ್ಥಿಗಳ ವಸತಿ ನಿಲಯಗಳ ಆಯ್ಕೆ ಪ್ರಕಿಯ ಮುಗಿಯದೆ ದಿನನಿತ್ಯ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ವಸತಿ ನಿಲಯಗಳ ಆಯ್ಕೆ ಪ್ರಕಿಯೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಬೇಕು. ಪ್ರಸಕ್ತ ವ?ದ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಹಾಸ್ಟೆಲ್‌ಗಳನ್ನು ತೆರೆಯಬೇಕು. ಹಾಸ್ಟೆಲ್‌ಗಳಲ್ಲಿ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss