ಬೀದರ: ಶಾಸಕರಾದ ರಹೀಂ ಖಾನ್ ಅವರು ಜನವಾಡ, ಅಲಿಯಂಬರ್, ಇಸ್ಲಾಂಪುರ್, ಮರಕಲ್ ಮತ್ತು ಗಾದಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಹಳ್ಳಿಗಳಿಗೆ ಇತ್ತೀಚೆಗೆ ಭೇಟಿ ನೀಡಿ ಮನೆ ಹಾನಿ ಹಾಗೂ ಬೆಳೆ ಹಾನಿ ಪರಿಶೀಲಿಸಿದರು.
ಇದೆ ವೇಳೆ ಶಾಸಕರು ಮನೆ ಹಾಗೂ ಬೆಳೆಹಾನಿ ಬಾಧಿತ ಕುಟುಂಬದವರೊAದಿಗೆ ಮಾತನಾಡಿದರು. ಈ ಬಗ್ಗೆ ಸರಿಯಾಗಿ ಪರಿಶೀಲಿಸಿ ಹಾನಿಯ ವಿವರದ ಬಗ್ಗೆ ವರದಿ ಮಾಡಬೇಕು. ಬೆಳೆನಷ್ಟ ಅನುಭವಿಸಿದ ರೈತರಿಗೆ ಸಮರ್ಪಕ ಪರಿಹಾರ ಸಿಗುವ ನಿಟ್ಟಿನಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಿ ಸಮೀಕ್ಷಾ ಕಾರ್ಯ ನಡೆಸಬೇಕು ಎಂದು ಸೂಚಿಸಿದರು. ಬೆಳೆ ನಷ್ಟ ಅನುಭವಿಸಿದ ರೈತರಿಗೆ ಮೊದಲಿಗಿಂತ ಹೆಚ್ಚಿನ ರೀತಿಯಲ್ಲಿ ಪರಿಹಾರ ಒದಗಿಸಬೇಕು ಎಂದು ಇದೆ ವೇಳೆ ರೈತ ಮಹಿಳೆಯರು ಶಾಸಕರಲ್ಲಿ ಮನವಿ ಮಾಡಿದರು.
ಇದೆ ವೇಳೆ ಶಾಸಕರು ಅನಿರೀಕ್ಷಿತವಾಗಿ ಜನವಾಡ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಆರೋಗ್ಯ ಸೌಲಭ್ಯಗಳ ಬಗ್ಗೆ ವಿಚಾರಿಸಿದರು. ವೈದ್ಯರ ಹಾಜರಾತಿ ಮತ್ತು ಅಲ್ಲಿನ ರೋಗಿಗಳಿಗೆ ಒದಗಿಸುತ್ತಿರುವ ಸೌಕರ್ಯಗಳ ಬಗ್ಗೆ ಶಾಸಕರು ಮಾಹಿತಿ ಪಡೆದರು.
ಈ ವೇಳೆ ತಹಸೀಲ್ದಾರ ಗಂಗಾದೇವಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ತಾರಾಮಣಿ ಜಿ.ಎಚ್., ತಾಪಂ ಕಾರ್ಯನಿರ್ವಹಣಾಧಿಕಾರಿ ಧನರಾಜ್ ಬೋರಾಳೆ, ಲೋಕೋಪಯೋಗಿ ಇಲಾಖೆಯ ಅಭಿಯಂತರರು, ಗ್ರಾಮ ಪಂಚಾಯತ್ ಸದಸ್ಯರು ಮತ್ತು ಎಲ್ಲ ಸಂಬAಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.