ಅಮರಾವತಿ(ಆಂಧ್ರ): ವಿಶಾಖಪಟ್ಟಣದಲ್ಲಿಂದು ಸಂಭವಿಸಿದ ಅನಿಲ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಹೈಕೋರ್ಟ್ ಸ್ವಯಂಪ್ರೇರಿತವಾಗಿ (ಸುಮೊಟೋ) ಸಾರ್ವಜನಿಕ ಹಿತಾಸಕ್ತಿ ರಿಟ್ ಅರ್ಜಿಂಯೊಂದನ್ನು ದಾಖಲಿಸಿ ವಿಚಾರಣೆ ಆರಂಭಿಸಿದೆ.
ಇದೇ ವೇಳೆ ರಾಜ್ಯ ಸರ್ಕಾರ ಮತ್ತು ಕಾರ್ಖಾನೆ ಆಡಳಿತ ವರ್ಗಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮಾಣಪತ್ರ ಸಲ್ಲಿಸಲು ಆದೇಶಿಸಿದೆ. ಪ್ರಕರಣದಲ್ಲಿ ಆಂಧ್ರ ಹೈಕೋರ್ಟ್ ಬಾರ್ ಕೌನ್ಸಿಲ್ ಅಧ್ಯಕ್ಷರನ್ನು ಅಮಿಕಸ್ ಕ್ಯೂರಿ ಆಗಿ ನೇಮಿಸಿದೆ. ಅಮಿಕಸ್ ಕ್ಯೂರಿ ಕೋರ್ಟ್ ಪರವಾಗಿ ಸ್ಥಳ ಪರಿಶೀಲನೆ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕಿದೆ.