Wednesday, June 29, 2022

Latest Posts

ವಿಶಾಖಪಟ್ಟಣದಲ್ಲಿ ಅನಿಲ ಸೋರಿಕೆ: 7 ಮಂದಿ ಸಾವು, ನೂರಾರು ಮಂದಿ ಅಸ್ವಸ್ಥ

ವಿಶಾಖಪಟ್ಟಣಂ: ಇಲ್ಲಿನ ರಾಸಾಯನಿಕ ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಾದ ಪರಿಣಾಮ ಏಳು ಮಂದಿ ಮೃತಪಟ್ಟು ನೂರಾರು ಮಂದಿ ಅಸ್ವಸ್ಥರಾಗಿದ್ದಾರೆ.

ನಗರಕ್ಕೆ ಸುಮಾರು ನಾಲ್ಕು ಕಿ.ಮಿ ದೊರದಲ್ಲಿರುವ ಎಲ್.ಜಿ ಪೊಲಿಮರ್ಸ್ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ಸೋರಿಕೆ ಉಂಟಾಗಿದ್ದರಿಂದ ಏಳು ಮಂದಿ ಸಾವಿಗೀಡಾಗಿದ್ದಾರೆ. ಗಾಯಗೊಂಡವರನ್ನು ವಿಶಾಖಪಟ್ಟಣಂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅನಿಲ ಸೋರಿಕೆಗೆ ಖಚಿತ ಕಾರಣ ತಿಳಿದು ಬಂದಿಲ್ಲ. ಅನಿಲ ಸೋರಿಕೆಯಿಂದ ಪಟ್ಟಣದ ಲಕ್ಷಾಂತರ ಮಂದಿ ನಾಗರಿಕರಿಗೂ ಈಗ ಭೀತಿ ಉಂಟಾಗಿದ್ದು ಜಿಲ್ಲಾಡಳಿತ ಸಮರೋಪಾದಿಯಲ್ಲಿ ತುರ್ತು ಕಾರ್ಯದಲ್ಲಿ ಮಗ್ನವಾಗಿದೆ. ಈ ಘಟನೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss