ವಿಶಾಖಪಟ್ಟಣ| ಮತ್ತೊಂದು ಕಾರ್ಖಾನೆಯಲ್ಲಿ ಅನಿಲ ಸೋರಿಕೆ: 2 ಬಲಿ, 4 ಮಂದಿ ಅಸ್ವಸ್ಥ

0
59

ವಿಶಾಖಪಟ್ಟಣಂ: ಆಂಧ್ರ ಪ್ರದೇಶದ ಮತ್ತೊಂದು ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಾಗಿದೆ.

ಸೈನರ್ ಲೈಫ್ ಸೈನ್ಸ್ ಪ್ರೈವೇಟ್ ಲಿ. ಕಾರ್ಖಾನೆಯಲ್ಲಿ ಬೆಂಜಿಮಿಡಾಜೋಲ್ ಎಂಬ ಅನಿಲ ಸೋರಿಕೆಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಹಾಗೂ 4 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಕುರಿತು ಮಾಹಿತಿ ನೀಡಿದ ಪಾರ್ವಡ ಪೊಲೀಸ್ ಠಾಣೆಯ ಅಧಿಕಾರಿ ಉದಯ್ ಕುಮಾರ್, ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಿಂದ 2 ಸಾವನ್ನಪ್ಪಿದ್ದು, ಅಸ್ವಸ್ಥಗೊಂಡ 4 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೇರೆಯಾವ ಸ್ಥಳಕ್ಕೂ ಅನಿಲ ಹರಡಿರದ ಹಿನ್ನಲೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮಾಹಿತಿ ಪಡೆಸಿದ್ದು, ಕಳೆದ ರಾತ್ರಿ 11.30ಕ್ಕೆ ಈ ದುರ್ಘಟನೆ ಸಂಭವಿಸಿದ್ದು, ಮುನ್ನೆಚ್ಚರಿಕಾ ಕ್ರಮ ಕೈಗೊಂಡು ಈಗಾಗಲೇ ಕಾರ್ಖಾನೆಯನ್ನು ಮುಚ್ಚಲಾಗಿದೆ. ಎಂದು ಆಂಧ್ರ ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

 

LEAVE A REPLY

Please enter your comment!
Please enter your name here