ಹೊಸದಿಲ್ಲಿ: ಇದೇ ಮೊದಲ ಬಾರಿಗೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ದೇಶದ ವಿವಿಧ 50 ಶಾಲೆಗಳ ವಿಶೇಷ ಚೇತನ ವಿದ್ಯಾರ್ಥಿಗಳ ಭಾಗಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸಂವಾದ ನಡೆಸಿದರು.
ದೆಹಲಿಯ ತಾಲ್ ಕಟೋರಾ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಪರೀಕ್ಷಾ ಒತ್ತಡದಿಂದ ಹೊರ ಬರುವ ಬಗ್ಗೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಮಾನವ ಸಂಪನ್ಮೂಲ ಇಲಾಖೆ ಸಚಿವಾಲಯದಿಂದ ಆಯೋಜಿಸಲಾಗಿರುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ವಿವಿಧ ರಾಜ್ಯಗಳ ವಿಶೇಷ ಚೇತನ ವಿದ್ಯಾರ್ಥಿಗಳು ಭಾಗಿಯಾಗಿರುವುದು ವಿಶೇಷ.
ಒಟ್ಟು 2 ಸಾವಿರ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. 1050 ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆ ಮೂಲಕ ಆಯ್ಕೆಯಾಗಿದ್ದಾರೆ.
ಕಳೆದ ವರ್ಷ 1.4 ಲಕ್ಷ ವಿದ್ಯಾರ್ಥಿಗಳು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಬಂಧ ಬರೆದಿದ್ದರು. ಈ ಬಾರಿ 2.6 ಲಕ್ಷ ವಿದ್ಯಾರ್ಥಿಗಳು ಪ್ರಬಂಧ ಬರೆದಿದ್ದರು.