ವಾಷಿಂಗ್ಟನ್: ಜಗತ್ತಿನಾದ್ಯಂತ ಕೊರೋನಾ ಹಾವಳಿ ಹೆಚ್ಚುತ್ತೇ ಇದೆ. ಈವರೆಗೆ ಜಗತ್ತಿನಾದ್ಯಂತ 3.51 ಕೋಟಿಗೂ ಅಧಿಕ ಮಂದಿಗೆ ಕೊರೊನಾ ವೈರಸ್ ದೃಢಪಟ್ಟಿದ್ದು, 10.03 ಲಕ್ಷಕ್ಕೂ ಹೆಚ್ಚು ಜನ ಮಹಾಮಾರಿ ಕೊರೋನಾಗೆ ಬಲಿಯಾಗಿದ್ದಾರೆ.
ಜಗತ್ತಿನಾದ್ಯಂತ ಈವರೆಗೆ 3,51,22,281 ಮಂದಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, 10,37,524 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಒಟ್ಟು ಸೋಂಕಿತರ ಪೈಕಿ 2,61,17,241 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 79,67,516 ಕೊರೊನಾ ಸೋಂಕಿನ ಪ್ರಕರಣಗಳು ಸಕ್ರಿಯವಾಗಿವೆ ಎಂದು ವರದಿಯಾಗಿದೆ.
ಅಮೆರಿಕಾದಲ್ಲಿ ಅತಿ ಹೆಚ್ಚು ಸೋಂಕಿತರು ಇರುವುದಾಗಿ ವರದಿಯಾಗಿದೆ.