ಕುಂಬಳೆ: ಬಿಜೆಪಿ ಕುಂಬಳೆ ಪಂಚಾಯತ್ ಸಮಿತಿಯ ಆಶ್ರಯದಲ್ಲಿ ಭಾನುವಾರ ವಿಶ್ವ ಯೋಗ ದಿನವನ್ನು ಕುಂಬಳೆಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ಪಂಚಾಯತ್ ಸಮಿತಿಯ ಅಧ್ಯಕ್ಷ ಕೆ.ಸುಧಾಕರ ಕಾಮತ್ ಅಧ್ಯಕ್ಷತೆ ವಹಿಸಿದರು.
ಬಿಜೆಪಿ ಮಂಜೇಶ್ವರ ಮಂಡಲ ಪ್ರಧಾನ ಕಾರ್ಯದರ್ಶಿ ಮುರಳೀಧರ ಯಾದವ್ ಕಾರ್ಯಕ್ರಮವನ್ನು ಉದ್ಘಾಟಿಸಿ ಯೋಗದ ಮಹತ್ವವನ್ನು ತಿಳಿಸಿದರು. ಇಡೀ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ದೇಶ ಭಾರತ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ನಿಟ್ಟಿನಲ್ಲಿ ಮಹಾನ್ ವ್ಯಕ್ತಿ ಹಾಗೂ ಶಕ್ತಿಯಾಗಿದ್ದಾರೆ ಎಂದರು.
ಯೋಗ ದಿನ ಕಾರ್ಯಕ್ರಮದಲ್ಲಿ ಬಿಜೆಪಿ ಪಂಚಾಯತ್ ಸಮಿತಿಯ ಉಪಾಧ್ಯಕ್ಷ ಕೆ.ಸುಜಿತ್ ರೈ , ಯುವಮೋರ್ಚಾ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಬಂಬ್ರಾಣ, ಯುವಮೋರ್ಚಾ ಪಂಚಾಯತ್ ಸಮಿತಿಯ ಅಧ್ಯಕ್ಷ ಪ್ರದೂಷ್ ನಾಯ್ಕಾಪು ಮೊದಲಾದವರು ಉಪಸ್ಥಿತರಿದ್ದರು. ಬಿಜೆಪಿ ಕುಂಬಳೆ ಪಂಚಾಯತ್ ಘಟಕದ ಪ್ರಧಾನ ಕಾರ್ಯದರ್ಶಿ ಜಿತೇಶ್ ನಾಯ್ಕಾಪು ಸ್ವಾಗತಿಸಿ, ಯುವಮೋರ್ಚಾ ಪಂಚಾಯತ್ ಘಟಕದ ಜೊತೆ ಕಾರ್ಯದರ್ಶಿ ರಾಜೇಶ್ ಬಂಬ್ರಾಣ ವಂದಿಸಿದರು.