Thursday, July 7, 2022

Latest Posts

ವಿ.ಕೆ.ಶಶಿಕಲಾ ನಟರಾಜನ್ ರ 2000 ಕೋಟಿ ರೂ.ಆಸ್ತಿ ಜಪ್ತಿ

ನವದೆಹಲಿ: ಬೇನಾಮಿ ತಡೆ ಕಾಯ್ದೆಯಡಿ ಆದಾಯ ತೆರಿಗೆ ಇಲಾಖೆ (ಇನ್​ಕಮ್​ ಟ್ಯಾಕ್ಸ್ ಡಿಪಾರ್ಟ್​ಮೆಂಟ್​) ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆಪ್ತ ಸಹಾಯಕಿ ವಿಕೆ ಶಶಿಕಲಾ ಅವರಿಗೆ ಸೇರಿದ್ದ ಸುಮಾರು 2000 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಬುಧವಾರ ಜಪ್ತಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.
ಬೇನಾಮಿ ನಿಷೇಧ ಕಾಯ್ದೆಯಡಿ ಈ ಕ್ರಮ ಕೈಗೊಳ್ಳಲಾಗಿದ್ದು, ಸಿರುಥಾವೂರ್ ಮತ್ತು ಕೊಡನಾಡುವಿನಲ್ಲಿರುವ 300 ಕೋಟಿ ರೂ.ಮೌಲ್ಯದ ಆಸ್ತಿಯೂ ಜಪ್ತಿಯಾಗಿದೆ. ಇವು ಶಶಿಕಲಾ, ಇಳವರಸಿ ಮತ್ತು ಸುಧಾಕರನ್​ ಹೆಸರಿನಲ್ಲಿ ಇದೆ. ಇಲ್ಲೀಗ ಐಟಿ ಇಲಾಖೆಯ ಬೇನಾಮಿ ನಿಷೇಧ ದಳ ಮುಟ್ಟುಗೋಲು ನೋಟಿಸ್ ಹಾಕಿದೆ.
ಈ ಬಗ್ಗೆ ಐಟಿ ಅಧಿಕೃತವಾಗಿ ಹೇಳಿಕೆ ಬಿಡುಗಡೆ ಮಾಡಿದ್ದು, ಒಟ್ಟಾರೆ 2000 ಕೋಟಿ ರೂ.ಮೌಲ್ಯದ ಸ್ವತ್ತು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss