ಹೊಸ ದಿಗಂತ ವರದಿ, ಕಲಬುರಗಿ:
ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪನೆ ಮಾಡಲು ಆದೇಶ ನೀಡಿದ ಬೆನ್ಗಲೆಯಲ್ಲಿ ನಗರದ ಸದಾ೯ರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಬಿ.ಎಸ ಯಡಿಯೂರಪ್ಪ ಅವರ ಭಾವಚಿತ್ರ ಕ್ಕೆ ಹಾಲಿನ ಅಭಿಷೇಕ ಮಾಡಿ ವಿಜಯೋತ್ಸವ ಆಚರಿಸಲಾಯಿತು.
ಶ್ರೀ ಪ್ರಶಾಂತ್ ಕಲ್ಲೂರ್ ನೇತೃತ್ವದ ವೀರಶೈವ ಲಿಂಗಾಯತ ಯುವ ವೇದಿಕೆ ವತಿಯಿಂದ ಅಭಿನಂಧನೆ ಸಲ್ಲಿಸಿ ಮಾತನಾಡಿದ ಅವರು, ಐತಿಹಾಸಿಕ ತಿಪಿ೯ಗೆ ನಾವು ಸ್ವಾಗತ ಕೋರುತ್ತೇವೆ. ವೀರಶೈವ ಲಿಂಗಾಯತ ಸಮುದಾಯವು ಆಥಿ೯ಕವಾಗಿ, ಶೈಕ್ಷಣಿಕ ವಾಗಿ ಹಾಗೂ ಸಾಮಾಜಿಕವಾಗಿ ಅಭಿವೃದ್ಧಿ ಮಾಡಲು ಈ ನಿಣ೯ಯ ಮಹತ್ವದ್ದಾಗಿದೆ ಎಂದರು.
ಸಂಭ್ರಮಾಚರಣೆಯಲ್ಲಿ ಜಿಲ್ಲಾಧ್ಯಕ್ಷ ದಯಾನಂದ್ ಪಾಟೀಲ್, ರಾಜ್ಯ ಸಮಿತಿಯ ಶ್ರೀಧರ ನಾಗನಹಳ್ಳಿ ವೇದಿಕೆಯ ಉಪಾಧ್ಯಕ್ಷರಾದ ಕಲ್ಯಾಣ್ ಪಾಟೀಲ್ ಕಣ್ಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಮಹಾ ಗಾವ್ಕರ್, ಕಾರ್ಯದರ್ಶಿ ಮಹೇಶ್ಚಂದ್ರ ಪಾಟೀಲ್ ಕಣ್ಣಿ, ಸಂಘಟನಾ ಕಾರ್ಯದರ್ಶಿ ಪರಮೇಶ್ವರ ಯಳಮೇಲಿ , ಸಹ ಸಂಘಟನಾ ಕಾರ್ಯದರ್ಶಿ ಆನಂದ ಕನಸೂರ್, ಜಿಲ್ಲಾ ಸಂಚಾಲಕರಾದ ಗುರುರಾಜ್ ಅಂಬಾಡಿ ,ಸತೀಶ್ ಮಾಹೋರ್, ಸುನೀಲ್ ಕೊಳಕೂರ್, ಗುರುರಾಜ್ ಸುಂಟನೂರ, ಅವಿನಾಶ್ ಅರಳಿ, ಮಲ್ಲು ಕೊಂಡೆದ ಮತ್ತು ವೇದಿಕೆ ಸದಸ್ಯರು ಉಪಸ್ಥಿತರಿದ್ದರು.