Friday, August 12, 2022

Latest Posts

ವೀರ ಯೋಧರ ಬಲಿದಾನ ನೋವು ತಂದಿದೆ: ರಾಜನಾಥ್ ಸಿಂಗ್

ನವದೆಹಲಿ: ಪೂರ್ವ ಲಡಾಕ್ ನ ಗಲ್ವಾನ್ ಕಣಿವೆ ಭಾಗದಲ್ಲಿ ಸೋಮವಾರ ಮಧ್ಯರಾತ್ರಿ ನಡೆದ ಘರ್ಷಣೆಯಲ್ಲಿ ೨೦ ಮಂದಿ ಭಾರತೀಯ ಯೋಧರು ಹುತಾತ್ಮರಾದ ಘಟನೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ದೇಶವನ್ನು ಕಾಪಾಡುವ, ದೇಶದ ಘನತೆ ಗೌರವವನ್ನು ಎತ್ತಿ ಹಿಡಿಯುವ ವಿಚಾರದಲ್ಲಿ ನಮ್ಮ ಸೈನಿಕರು ವಿಶೇಷ ಧೈರ್ಯ, ಸಾಹಸ ಮೆರೆದಿದ್ದಾರೆ. ಪ್ರಾಣಕ್ಕಿಂತ ದೇಶ ಮುಖ್ಯ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ೨೦ ಮಂದಿ ಯೋಧರ ತ್ಯಾಗ, ಬಲಿದಾನ ವಿಷಯ ಮನಸ್ಸಿಗೆ ತೀವ್ರ ನೋವುವನ್ನು ಉಂಟುಮಾಡುತ್ತಿದೆ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
ಹುತಾತ್ಮ ಸೈನಿಕರ ವೀರ ಬಲಿದಾನವನ್ನು ದೇಶ ಯಾವತ್ತಿಗೂ ಮರೆಯುವುದಿಲ್ಲ. ಅವರ ಕುಟುಂಬಸ್ಥರ ಜೊತೆ ಈ ಕಠಿಣ ಪರಿಸ್ಥಿತಿಯಲ್ಲಿ ನಾವು ಖಂಡಿತವಾಗಿಯೂ ಇರುತ್ತೇವೆ ಎಂದು ಪ್ರತಿಕ್ರಿಯಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss