Wednesday, July 6, 2022

Latest Posts

ವೆನ್ಲಾಕ್ ಆಸ್ಪತ್ರೆಯಲ್ಲಿ ಎಂಫ್ರೆಂಡ್ಸ್‌ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಸಾಥ್

ಹೊಸದಿಗಂತ ವರದಿ,ಮಂಗಳೂರು:

ಅತ್ಯಂತ ಬಡ ಮತ್ತು ಮಧ್ಯಮ ವರ್ಗದವರು ಆರ್ಥಿಕ ಸಂಕಷ್ಟದಿಂದ ಸರಕಾರಿ ಆಸ್ಪತ್ರೆಗೆ ದಾಖಲಾಗುತ್ತಾರೆ. ಅವರ ಜತೆಗಾರರಿಗೆ ಊಟದ ಖರ್ಚು ಮತ್ತಷ್ಟು ಹೊರೆ. ಇಂಥ ಸಂದರ್ಭದಲ್ಲಿ ಅವರಿಗೆ ನಿರಂತರ ಉಚಿತ ಊಟ ಕೊಡುತ್ತಿರುವ ಎಂಫ್ರೆಂಡ್ಸ್‌ನ ಕಾರ್ಯಕ್ರಮ ಅತ್ಯಂತ ಪುಣ್ಯದಾಯಕ. ಇದಕ್ಕೆ ಸರ್ವರ ಸಹಕಾರ ಅಗತ್ಯ ಎಂದು ಮೇಯರ್ ದಿವಾಕರ ಪಾಂಡೇಶ್ವರ ಹೇಳಿದರು.

ವೆನ್ಲಾಕ್ ಆಸ್ಪತ್ರೆಯಲ್ಲಿ ಒಳರೋಗಿಗಳ ಜತೆ ಇರುವವರಿಗೆ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್‌ನಿಂದ ಉಚಿತ ಊಟ ನೀಡುವ ಕಾರುಣ್ಯ ಯೋಜನೆಗೆ ಪ್ರತಿವರ್ಷದಂತೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ ನೀಡುವ ಒಂದು ತಿಂಗಳಿನ ಪ್ರಾಯೋಜಕತ್ವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮಾತನಾಡಿ, ಒಕ್ಕೂಟ ಪ್ರತಿವರ್ಷ ಹಲವಾರು ಸೇವಾ ಕಾರ್ಯಕ್ರಮ ಆಯೋಜಿಸುತ್ತಿದೆ. ಆ ಪೈಕಿ ಕಾರುಣ್ಯಕ್ಕೆ ನೆರವು ನೀಡುವುದು ವಿಶಿಷ್ಟ ವಾದುದು. ಜಾತಿ, ಧರ್ಮದ ಭೇದವಿಲ್ಲದೆ ಕ್ಲಪ್ತ ಸಮಯಕ್ಕೆ ಶಿಸ್ತಿನಿಂದ ಗುಣಮಟ್ಟದ ಆಹಾರ ನೀಡುತ್ತಿರುವುದು ಶ್ಲಾಘನೀಯ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss