Monday, August 8, 2022

Latest Posts

ವೈದ್ಯರ ಮೇಲೆ ಹಲ್ಲೆ ತಡೆಯುವ ಸಾಂಕ್ರಮಿಕ ರೋಗಗಳ ವಿಧೇಯಕ, ಬಿಡಿಎ ವಿಧೇಯಕ ಅಂಗೀಕಾರ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ವಿಧಾನಸಭೆಯಲ್ಲಿ ಹಾಗೂ ವೈದ್ಯರ ಮೇಲೆ ಹಲ್ಲೆ ತಡೆಯುವ ಸಾಂಕ್ರಮಿಕ ರೋಗಗಳ ತಿದ್ದುಪಡಿ ವಿಧೇಯಕ 2020ಯನ್ನು ವಿಧಾನ ಪರಿಷತ್ ನಲ್ಲಿ ಶುಕ್ರವಾರ ಅಂಗೀಕರಿಸಲಾಗಿದೆ.
ಈಗಾಗಲೇ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿರುವ ಕರ್ನಾಟಕ ಸಾಂಕ್ರಾಮಿಕ ರೋಗಗಳ ವಿಧೇಯಕ 2020 ವನ್ನು ವಿಧಾನ ಪರಿಷತ್ತಿನಲ್ಲಿ ಮಂಡಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು, ಸಾಂಕ್ರಾಮಿಕ ರೋಗಗಳ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು, ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ, ಹಲ್ಲೆ ಮಾಡಿದರೆ ಶಿಕ್ಷೆ ಹಾಗೂ ದಂಡದ ಮೊತ್ತ ಹೆಚ್ಚಿಸಲಾಗುವುದು ಎಂದರು.
ಯಾರೇ ವ್ಯಕ್ತಿಗಳು ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ವೈದ್ಯರಿಗೆ ಅಡ್ಡಿಪಡಿಸಿದರೆ, ಹಲ್ಲೆ ಮಾಡಿದರೆ ಮೂರು ತಿಂಗಳಿಂದ ಐದು ವರ್ಷದವರೆಗೆ ಜೈಲು ಶಿಕ್ಷೆ. 50 ಸಾವಿರದಿಂದ 2 ಲಕ್ಷ ರೂ.ಗಳವರೆಗೆ ದಂಡ ವಿಧಿಸಲಾಗುವುದು ಎಂದರು.
ವಿಧಾನ ಸಭೆಯಲ್ಲಿಂದು 2020ನೇ ಸಾಲಿನ ಬೆಂಗಳೂರು ಅಭಿವೃದ್ದಿ (ತಿದ್ದುಪಡಿ)ವಿಧೇಯಕವನ್ನು ಪರ್ಯಾಲೋಚನೆ ಚೆರ್ಚೆ ವೇಳೆ ಅಧಿವೇಶನದಲ್ಲಿ ಭಾರೀ ಚೆರ್ಚೆಗೆ ಗ್ರಾಸವಾಯಿತು. ಸರ್ಕಾರಿ ಭೂಮಿಯಲ್ಲಿ ಮನೆ ಕಟ್ಟಿಕೊಂಡು 12 ವರ್ಷ ಅಸ್ಥಿತ್ವದಲ್ಲಿರುವ ಕಟ್ಟಡಗಳಿಗೆ ದರ ನಿಗದಿಪಡಿಸಿ ಸ್ವಾಧೀನ ಕೊಡುವ ವಿಧೇಯಕ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss