ಹೊಸದಿಗಂತ ಡಿಜಿಟಲ್ ಡೆಸ್ಕ್:
ಹದಿನೆಂಟನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಲಿದೆ.
ಜುಲೈ 3ರವರೆಗೆ ನಡೆಯಲಿರುವ ಅಧಿವೇಶನದ ಮೊದಲ ಎರಡು ದಿನಗಳಲ್ಲಿ ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನೂತನ ಲೋಕಸಭಾ ಸ್ಪೀಕರ್ ಆಯ್ಕೆ ಬುಧವಾರ ನಡೆಯಲಿದ್ದು, ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ನೀಟ್-ಯುಜಿ ಪತ್ರಿಕೆ ಸೋರಿಕೆ, ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ಮುಂದೂಡಿಕೆ ವಿಚಾರದಲ್ಲಿಯೂ ಸರ್ಕಾರವನ್ನು ಮೂಲೆಗುಂಪು ಮಾಡಲು ಪ್ರತಿಪಕ್ಷಗಳು ತಂತ್ರ ರೂಪಿಸಿದ್ದು, ಮೊದಲ ದಿನವೇ ಗದ್ದಲ ನಡೆಯುವ ಸಾಧ್ಯತೆ ಇದೆ.