Wednesday, August 17, 2022

Latest Posts

ಶಬರಿಮಲೆ ಅಯ್ಯಪ್ಪನ ದರುಶನಕ್ಕೆ ಹೊಸ ಮಾರ್ಗಸೂಚಿ: ದಿನಕ್ಕೆ ಒಂದು ಸಾವಿರ ಭಕ್ತರಿಗೆ ಮಾತ್ರ ಅವಕಾಶ  

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕೇರಳದ ಪ್ರಸಿದ್ಧ ಯಾತ್ರಾಸ್ಥಳ ಶಬರಿಮಲೆಯ ಮಂಡಲ-ಮಕರವಿಳಕ್ಕು ವರ್ಷದ ಕಾರ್ಯಕ್ರಮಕ್ಕೆ ತೆರಳುವ ಭಕ್ತರಿಗೆ ರಾಜ್ಯ ಸರಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಹೊಸ ಮಾರ್ಗಸೂಚಿಯಂತೆ ಪ್ರತಿದಿನ ಕೇವಲ ಒಂದು ಸಾವಿರ ಯಾತಾರ್ಥಿಗಳಿಗೆ ಮಾತ್ರ ಅಯ್ಯಪ್ಪನ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಆದರೆ ಪ್ರತಿ ವಾರಾಂತ್ಯದಲ್ಲಿ  2 ಸಾವಿರ ಯಾತ್ರಾರ್ಥಿಗಳಿಗೆ ಅವಕಾಶವಿರುತ್ತದೆ. ಇದಲ್ಲದೆ ಯಾತ್ರೆಗೆ ಹೋಗುವ ಎಲ್ಲಾ ಭಕ್ತರೂ ಶಬರಿಮಲೈ ವೆಬ್ ಸೈಟ್ ಪೋರ್ಟ್ ನಲ್ಲಿ ನೋಂದಣಿ ಮಾಡಿಕೊಳ್ಳಲು ಸೂಚನೆ ಕೂಡ ಸರಕಾರ ನೀಡಿದೆ. ಕೊರೋನಾ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಈ ನೂತನ ಕ್ರಮಕ್ಕೆ ಸರಕಾರ ಮುಂದಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!