Friday, July 1, 2022

Latest Posts

ಶಬರಿಮಲೆ ಅಯ್ಯಪ್ಪ ಭಕ್ತರಿಗೆ ವೆಬ್‌ಸೈಟ್ ಪೋರ್ಟಲ್ ನೋಂದಣಿ ಕಡ್ಡಾಯ

ಹೊಸ ದಿಗಂತ ಆನ್‌ಲೈನ್ ಡೆಸ್ಕ್:

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳವಾದ ಶ್ರೀ ಶಬರಿಮಲೆ ಕ್ಷೇತ್ರಕ್ಕೆ ತೆರಳುವ ಭಕ್ತರು ವೆಬ್ ಸೈಟ್ ಪೋರ್ಟಲ್‌ನಲ್ಲಿ ಕಡಾಯವಾಗಿ ನೋಂದಣಿ ಮಾಡಿಕೊಳ್ಳುವಂತೆ ಸರಕಾರ ಆದೇಶ ನೀಡಿದೆ.

ಕೊರೋನಾ ಹಾವಳಿ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಸರಕಾರ ವ್ಯಾಪಕ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುತ್ತಿದ್ದು, ಅದರ ಭಾಗವಾಗಿ ಈ ಆದೇಶ ಹೊರಬಿದ್ದಿದೆ. ಇಲ್ಲಿ ಪ್ರತಿದಿನ ಸಾವಿರ ಭಕ್ತಾಧಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ವಾರಾಂತ್ಯದಲ್ಲಿ ಮಾತ್ರ ಪ್ರತಿ ದಿನ ಎರಡು ಸಾವಿರ ಜನ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ.

ಮೊದಲು ನೋಂದಣಿ ಮಾಡಿದವರಿಗೆ ಮೊದಲ ಆದ್ಯತೆ ನೀಡಲಾಗುವುದು ಅಲ್ಲದೆ, ದೇವಸ್ಥಾನಕ್ಕೆ ಭೇಟಿ ನೀಡುವ 48 ಗಂಟೆ ಅವಧಿಗೆ ಮುನ್ನ ಕೊರೋನಾ ನೆಗೆಟಿವ್ ಪ್ರಮಾಣ ಪತ್ರ ಕಡ್ಡಾಯವಾಗಿ ಸಲ್ಲಿಸಬೇಕು ಎಂದೂ ಸರಕಾರ ಸೂಚಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss