spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಶಬರಿಮಲೆ ದೇಗುಲಕ್ಕೆ ಭಕ್ತರ ಪ್ರವೇಶ ಅನಿರ್ದಿಷ್ಟಾವಧಿ ಮುಂದೂಡಿಕೆ: ಸದ್ಯಕ್ಕಿಲ್ಲ ಅಯ್ಯಪ್ಪ ದರುಶನ

- Advertisement -Nitte

ತಿರುವನಂತಪುರ: ಜೂ. 14 ರಿಂದ ಶಬರಿಮಲೆ ದೇವಸ್ಥಾನವನ್ನು ತೆರೆಯುವ ಪ‍್ರಸ್ತಾಪವನ್ನು ಕೈ ಬಿಡಬೇಕು ಎಂದು ತಿರುವಾಂಕೂರು ದೇವಸ್ವ ಮಂಡಳಿ ಮನವಿಗೆ ಸರ್ಕಾರ ಒಪ್ಪಿಗೆ ನೀಡಿದ್ದು, ಶಬರಿಮಲೆ ದೇಗುಲಕ್ಕೆ ಭಕ್ತರ ಪ್ರವೇಶವನ್ನು ಅನಿರ್ದಿಷ್ಟ ಕಾಲದವರೆಗೆ ಮುಂದೂಡಿದೆಯಲ್ಲದೆ ಇದೇ ತಿಂಗಳ 19ರಂದು ನಡೆಯಬೇಕಿದ್ದ ಉತ್ಸವವನ್ನು ಕೂಡಾ ರದ್ದುಗೊಳಿಸಿದೆ.
ಶಬರಿಮಲೆ ದೇವಸ್ಥಾನದಲ್ಲಿ ಜೂನ್‌ 14ರಿಂದ ಭಕ್ತರಿಗೆ ಪ್ರವೇಶ ನೀಡುವುದಾಗಿ ಕೇರಳ ಸರ್ಕಾರ ಘೋಷಿಸಿತ್ತು. ಆದರೆ ಕೋವಿಡ್‌-19 ಪ್ರಕರಣಗಳ ಪ್ರಮಾಣ ಹೆಚ್ಚುತ್ತಿರುವುದರಿಂದ ದೇವಸ್ಥಾನದ ಪ್ರಧಾನ ಅರ್ಚಕ ಕಂಡರರ್‌ ಮಹೇಶ್‌ ಮೋಹನರ್ ಈ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿದ್ದರು. ಹೀಗಾಗಿ ಪುನಃ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ದೇವಸ್ವಂ ಖಾತೆ ಸಚಿವ ಕಡಕಂಪಳ್ಳಿ ಸುರೇಂದ್ರನ್‌ ತಿಳಿಸಿದ್ದರು. ಅದರಂತೆ ಮುಜರಾಯಿ ಸಚಿವರ​ ನೇತೃತ್ವದಲ್ಲಿ, ಅಧಿಕಾರಿಗಳು ಪಾಲ್ಗೊಂಡಿದ್ದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss