ಶಿವಮೊಗ್ಗ: ಶರಾವತಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಲಿಂಗನಮಕ್ಕಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದ್ದು ಯಾವುದೇ ಸಂದರ್ಭದಲ್ಲಿ ಹೆಚ್ಚುವರಿ ನೀರು ಬಿಡುವ ಸಾಧ್ಯತೆ ಇರುವುದರಿಂದ ತಗ್ಗು ಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಲಿಂಗನಮಕ್ಕಿಯಿಂದ ಹೆಚ್ಚುವರಿ ನೀರು ಬಿಡುವುದರಿಂದ ಬ್ಯಾಲೆನ್ಸಿಂಗ್ ಜಲಾಶಯವಾದ ಗೇರುಸೊಪ್ಪ ಅಣೆಟ್ಟೆಯಿಂದ ತಕ್ಷಣ ನೀರು ಹೊರ ಬಿಡುವುದರಿಂದ ನದಿಪಾತ್ರದ ನಿವಾಸಿಗಳು ಎಚ್ಚರ ವಹಿಸುವಂತೆ ತಿಳಿಸಲಾಗಿದೆ.
ಲಿಂಗನಮಕ್ಕಿ ಜಲಾಶಯದ ಗರಿಷ್ಠ ಮಟ್ಟ 1819 ಅಡಿಯಾಗಿದ್ದು, ಮಂಗಳವಾರ ಬೆಳಗಿನ ವರದಿಯಂತೆ ಜಲಾಶಯದ ಮಟ್ಟ 1812.30 ಅಡಿಗೆ ತಲುಪಿದೆ. 44367 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ.
ಇದರಿಂದಾಗಿ ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಯಾವ ಸಂದರ್ಭದಲ್ಲಾದರೂ ನೀರು ಬಿಡುವ ಸಾಧ್ಯತೆ ಇದೆ ಎಂದು ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
- Advertisement -