ಶಹಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಐಸೋಲೇಶನ್ ವಾರ್ಡ್ ಸ್ಥಾಪನೆಗಾಗಿ ಸ್ಥಳ ಪರಿಶೀಲನೆ

0
17

ಯಾದಗಿರಿ:ಶಹಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್-19 ಪಾಸಿಟಿವ್ ವ್ಯಕ್ತಿಗಳಿಗೆ 50 ಹಾಸಿಗೆಯುಳ್ಳ ಪ್ರತ್ಯೇಕ ಐಸೋಲೇಶನ್ ವಾರ್ಡ್ ಸ್ಥಾಪನೆಗಾಗಿ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಅವರು ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದರು.
ಪ್ರತಿ ಬೆಡ್ಗೆ ಸಮರ್ಪಕವಾಗಿ ಆಕ್ಸಿಜನ್ ಸಂಪರ್ಕ ವ್ಯವಸ್ಥೆ ಆಗಬೇಕು. ಕೋವಿಡ್-19 ಐಸೋಲೇಶನ್ ವಾರ್ಡ್ ಮತ್ತು ಸಾಮಾನ್ಯ ರೋಗಿಗಳ ವಾರ್ಡ್ ಗಳಿಗೆ ಯಾವುದೇ ರೀತಿಯ ಸಂಪರ್ಕ ಇರಬಾರದು. ಈ ನಿಟ್ಟಿನಲ್ಲಿ 50 ಹಾಸಿಗೆಗಳು ಒಂದೇ ಕಡೆ ಇರಬೇಕು ಮತ್ತು ಐಸೋಲೇಶನ್ ವಾರ್ಡ್ಗೆ ಪ್ರತ್ಯೇಕ ಪ್ರವೇಶ ದ್ವಾರ ಇರಲಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಇದೇ ಸಂದರ್ಭದಲ್ಲಿ ಸದರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ಥಾಪಿಸಲಾದ ಫೀವರ್ ಕ್ಲಿನಿಕ್ ಮತ್ತು ಗಂಟಲು ದ್ರವ ಮಾದರಿ ಸಂಗ್ರಹ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲನೆ ಮಾಡಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಮೇಶ ಗುತ್ತೇದಾರ, ಆಡಳಿತ ವೈದ್ಯಾಧಿಕಾರಿ ಡಾ.ಮಲ್ಲಪ್ಪ ಕೆ. ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here