Saturday, August 13, 2022

Latest Posts

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಗ್ಯಾರೇಜ್ ಗೆ ಬೆಂಕಿ: ಅಪಾರ ಪ್ರಮಾಣದ ಹಾನಿ

 ಹುಬ್ಬಳ್ಳಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಗ್ಯಾರೇಜ್ ಬೆಂಕಿ ಹೊತ್ತಿಕೊಂಡಿರುವ ಘಟನೆ ನಗರದ ಬಿಡ್ನಾಳ ಕ್ರಾಸ್ ನಲ್ಲಿರುವ ನೋಬಲ್ ಪೇಂಟಿಂಗ್ ಗ್ಯಾರೇಜ್ ನಲ್ಲಿ ನಡೆದಿದೆ.
ಮುಲ್ಲಾ ಎಂಬುವವರಿಗೆ ಸೇರಿದ ಪೇಂಟಿಂಗ್ ಗ್ಯಾರೇಜ್ ಆಗಿದ್ದು, ಶಾರ್ಟ್ ಸರ್ಕ್ಯೂಟ್ ನಿಂದಾಗಿ ನೋಬಲ್ ಗ್ಯಾರೇಜ್ ನಲ್ಲಿದ್ದ ವಾಹನಗಳಿಗೆ ಬೆಂಕಿ ಹತ್ತಿಕೊಂಡಿದೆ.
ಒಂದು ಗಂಟೆಗೂ ಅಧಿಕ ಕಾಲ ಹೊತ್ತಿ ಉರಿದ ಗ್ಯಾರೇಜ್, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವಲ್ಲಿ ಹರಸಾಹಸ ಮಾಡುತ್ತಿದ್ದಾರೆ. ಈ ಘಟನೆಯಿಂದಾಗಿ ಅಪಾರ ಪ್ರಮಾಣದ ಹಾನಿಯಾಗಿದ್ದು, ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss