Wednesday, July 6, 2022

Latest Posts

ಶಾಲಾ-ಕಾಲೇಜುಗಳ ಆರಂಭದ ಕುರಿತು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದೇನು?

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೊರೋನಾ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಲಾ-ಕಾಲೇಜುಗಳ ಆರಂಭದ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ. ಪರಿಸ್ಥಿತಿ ನೋಡಿಕೊಂಡು ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಕೊರೋನಾ ಸೋಂಕು ಹೆಚ್ಚು ಇರುವ ಬಳ್ಳಾರಿ, ದಕ್ಷಿಣ ಕನ್ನಡ, ಹಾಸನ, ಧಾರವಾಡ, ಬೆಳಗಾವಿ, ಮೈಸೂರು, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ ಕುರಿತು ಸಿಎಂ ಹೇಳಿದ್ದಾರೆ .
ಸಾವಿನ ಸಂಖ್ಯೆ ಮತ್ತು ಸೋಂಕಿನ ಸಂಖ್ಯೆ ಹೆಚ್ಚಿರುವ ಬಗ್ಗೆ ವಿವರವಾದ ಮಾಹಿತಿ ಪಡೆದಿದ್ದೇನೆ. ಕಳೆದ ಒಂದು ವಾರದಿಂದ ಇದರ ನಿಯಂತ್ರಣಕ್ಕೆ ಕಠಿಣ ಪ್ರಯತ್ನ ನಡೆಯುತ್ತಿದೆ. ಎಲ್ಲರ ಪ್ರಯತ್ನದಿಂದ ಸಾವಿನ ಸಂಖ್ಯೆ ಶೇಕಡಾ ಒಂದಕ್ಕಿಂತ ಕಡಿಮೆಯಾಗಿದೆ.
ತುಮಕೂರು, ಮೈಸೂರು, ಧಾರವಾಡ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾವಿನ ಮತ್ತು ಸೋಂಕಿತರ ಸಂಖ್ಯೆ ಹೆಚ್ಚಿದೆ. ಉಳಿದ ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಬರುತ್ತಿದೆ. ಮುಂದಿನ ಒಂದು ವಾರದಲ್ಲಿ ಇನ್ನಷ್ಟು ನಿಯಂತ್ರಣಕ್ಕೆ ಶ್ರಮಿಸಿ ಆನಂತರ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss