ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, May 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಶಾಲೆಗೆ ಮಕ್ಕಳನ್ನು ಕಳುಹಿಸುವುದು, ಬಿಡುವುದು ಪೋಷಕರ ವಿವೇಚನೆಗೆ ಬಿಟ್ಟಿದ್ದು: ಶಾಸಕ ಎಸ್.ಎ.ರಾಮದಾಸ್

ಮೈಸೂರು: ಶಾಲೆಗೆ ಮಕ್ಕಳನ್ನು ಕಳುಹಿಸುವುದು, ಬಿಡುವುದು ಪೋಷಕರ ವಿವೇಚನೆಗೆ ಬಿಟ್ಟಿದ್ದು ಎಂದು ಶಾಸಕ ಎಸ್.ಎ.ರಾಮದಾಸ್ ಹೇಳಿದರು.
ಗುರುವಾರ ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೯ ನೇ ತರಗತಿ ತನಕ ಮಕ್ಕಳು ಆಟವಾಡಿಕೊಂಡು ಬೆಳೆದಿರುತ್ತಾರೆ. ೯ ನೇ ತರಗತಿಯ ಬಳಿಕದ ವಿದ್ಯಾರ್ಥಿಗಳು ಭೌತಿಕ ವ್ಯವಸ್ಥೆಯನ್ನು ಸಬಲರಾಗಿ ಹೊಂದಿರುತ್ತಾರೆ. ಹಾಗಾಗಿ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವ ಬಗ್ಗೆ ಸಾಧಕ, ಭಾದಕಗಳ ಬಗ್ಗೆ ತಿಳಿದು, ಸೂಕ್ತವಾದ ನಿರ್ಧಾರವನ್ನು ತೆಗೆದುಕೊಳ್ಳಬೇಕು. ಮಕ್ಕಳನ್ನು ಶಾಲೆಗೆ ಕಳುಹಿಸುವ ಇಚ್ಚೆಯಾದರೆ ಕಳುಹಿಸಬಹುದು, ಇಲ್ಲದಿದ್ದರೆ ಆನ್‌ಲೈನ್ ತರಗತಿಯಲ್ಲಿಯೇ ಮಕ್ಕಳಿಗೆ ಶಿಕ್ಷಣ ಕೊಡಿಸಬಹುದು ಎಂದು ತಿಳಿಸಿದರು.
ಪೋಷಕರು ಮಕ್ಕಳ ಮನಸ್ಥಿತಿಯನ್ನು ಅರಿಯಬೇಕು. ನನ್ನ ಪ್ರಕಾರ ಮಕ್ಕಳನ್ನು ಶಾಲೆಗೆ ಕಳುಹಿಸುವುದು ಸೂಕ್ತ. ಇದನ್ನೇ ನಾನು ಶಿಕ್ಷಣ ಸಚಿವರಿಗೂ ತಿಳಿಸಿದ್ದೇನೆ ಎಂದರು.
ಶರತ್ ವರ್ಗಾವಣೆ ಸಿಎಂ ಪರಮಾಧಿಕಾರ: ಯಾವುದೇ ಅಧಿಕಾರಿಯನ್ನು ವರ್ಗಾವಣೆ ಮಾಡುವುದು ಮುಖ್ಯಮಂತ್ರಿಗಳಿಗೆ ಸೇರಿದ ಪರಮಾಧಿಕಾರವಾಗಿದೆ. ಆಡಳಿತಾತ್ಮಕ ದೃಷ್ಠಿಯಿಂದ ಮೈಸೂರು ಜಿಲ್ಲಾಧಿಕಾರಿ ಸ್ಥಾನದಿಂದ ಬಿ.ಶರತ್ ಅವರನ್ನು ವರ್ಗಾವಣೆ ಮಾಡಲಾಗಿದೆಯೇ ವಿನಹ, ಬೇರೆ ಯಾವುದೇ ಕಾರಣದಿಂದಲ್ಲ, ಮುಖ್ಯಮಂತ್ರಿಗಳ ನಿರ್ಧಾರವನ್ನು ಸ್ವಾಗತಿಸುತ್ತೇವೆ ಎಂದರು.
ಇನ್ನೊಂದು ಆಸ್ಪತ್ರೆ ತೆರೆಯಿರಿ: ಮೈಸೂರಿನಲ್ಲಿ ಹೆಚ್ಚಾಗಿ ಗರ್ಭಿಣಿ ಮಹಿಳೆಯರು ಕೊರೋನಾ ಸೋಂಕಿಗೆ ಒಳಗಾಗುತ್ತಿದ್ದಾರೆ. ಹೀಗಾಗಲೇ ಇರುವ ಆಸ್ಪತ್ರೆ ರೋಗಿಗಳಿಂದ ತುಂಬಿ ತುಳುಕುತ್ತಿದೆ. ಹಾಗಾಗಿ ತಕ್ಷಣವೇ ಗರ್ಭಿಣಿಯರಿಗಾಗಿ ಮತ್ತೊಂದು ಆಸ್ಪತ್ರೆಯನ್ನು ಆರಂಭಿಸುವAತೆ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss