Friday, August 12, 2022

Latest Posts

ಶಾಲೆ ಆರಂಭಿಸಲು ರಾಜ್ಯ ಸರ್ಕಾರ ಯಾವುದೇ ದಿನಾಂಕ ನಿಗದಿ ಮಾಡಿಲ್ಲ: ಸಚಿವ ಸುರೇಶಕುಮಾರ ಸ್ಪಷ್ಟನೆ

ಬೀದರ: ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಬಗ್ಗೆ ರಾಜ್ಯ ಸರ್ಕಾರವು ಯಾವುದೇ ದಿನಾಂಕ ನಿಗದಿ ಮಾಡಿಲ್ಲ. ಸದ್ಯದಲ್ಲೇ ಪ್ರಾರಂಭ ಮಾಡುವ ಬಗ್ಗೆ ಯೋಚಿಸಿಲ್ಲ. ಹೀಗಾಗಿ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರಾದ ಎಸ್.ಸುರೇಶಕುಮಾರ್ ಅವರು ಸ್ಪಷ್ಟಪಡಿಸಿದರು.
ಜಿಲ್ಲೆಗೆ ಸೆ.29ರಂದು ಆಗಮಸಿ, ನಾನಾ ಶಾಲೆಗಳಿಗೆ ಭೇಟಿ ನೀಡಿ, ಅಲ್ಲಿನ ಮೂಲಸೌಕರ್ಯಗಳ ಪರಿಶೀಲನೆ ನಡೆಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಮಕ್ಕಳ ಹಿತವೇ ಸರ್ಕಾರದ ಮೊದಲ ಆದ್ಯತೆಯಾಗಿದೆ. ಜನರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ತಿಳಿಸಿದರು.
ಶಾಲೆಗಳು ನಡೆಯದೇ ಇರುವುದರಿಂದ ಬಾಲ ಕಾರ್ಮಿಕರ ಸಂಖ್ಯೆ ಹೆಚ್ಚಾಗುತ್ತಿದೆ ಎನ್ನುವ ದೂರುಗಳು ಬರುತ್ತಿವೆ. ಆದ್ದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಶಿಕ್ಷಣಕ್ಕೆ ಸಂಬAಧಿಸಿದ ಸಂಘಟನೆಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸಿ ಶಾಲೆಗಳು ಆರಂಭಿಸುವ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಪೋಷಕರು ಸಹ ಮುಕ್ತವಾಗಿ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಇಮೇಲ್ ಐಡಿ ನೀಡಲಾಗಿದೆ. ಶಾಲೆಗಳನ್ನು ಆರಂಭಿಸುವ ಬಗ್ಗೆ ಯಾವುದೇ ಧಾವಂತ ಮತ್ತು ಅವಸರ ಇಲ್ಲ. ಮಕ್ಕಳ ಹಿತ, ಪೋಷಕರ ಕಾಳಜಿಯನ್ನು ಮನಸ್ಸಿನಲ್ಲಿಟ್ಟುಕೊಂಡು ಮುಂದಿನ ನಿರ್ಣಯ ತೆಗೆದುಕೊಳ್ಳಲಾಗುವುದು ಸಚಿವರು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss