Sunday, June 4, 2023

Latest Posts

ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಆಯ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಹಿಂಭಾಗದ ಇಂದಿರಾಗಾಂಧಿ ಭವನದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು.

ಆ ಬಳಿಕ ಸರ್ಕಾರ ರಚನೆ ಕುರಿತು ರಾಜ್ಯಪಾಲರನ್ನು ಭೇಟಿಯಾಗಲು ಸಿದ್ದರಾಮಯ್ಯ ಮತ್ತು ಡಿಕೆಶಿ ಒಂದೇ ವಾಹನದಲ್ಲಿ ರಾಜಭವನಕ್ಕೆ ತೆರಳಿದರು.

ಸಭೆ ಆರಂಭವಾಗುತ್ತಿದ್ದಂತೆ ಡಿಕೆ ಶಿವಕುಮಾರ್​, ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡುವಂತೆ ಒಂದು ಸಾಲಿನ ನಿರ್ಣಯವನ್ನು ಮಂಡಿಸಿದರು. ಈ ನಿರ್ಣಯಕ್ಕೆ ಭಾಗವಹಿಸಿದ್ದ ಎಲ್ಲ 135 ಶಾಸಕರು ಅನುಮೋದನೆ ನೀಡಿದರು. ಈ ಮೂಲಕ ಸಿದ್ದರಾಮಯ್ಯ ಕಾಂಗ್ರೆಸ್​ ಪಕ್ಷದ ನೂತನ ಶಾಸಕಾಂಗ ಪಕ್ಷದ ನಾಯಕರಾಗಿ ಅಧಿಕೃತವಾಗಿ ಆಯ್ಕೆಯಾದರು. ಉಭಯ ನಾಯಕರ ನೇತೃತ್ವದಲ್ಲಿ ಶಾಸಕಾಂಗ ಸಭೆಯಲ್ಲಿ ಹಿರಿ ಕಿರಿಯ ಶಾಸಕರೆಲ್ಲ ಭಾಗಿಯಾಗಿದ್ದರು.

20 ನಿಮಿಷಕ್ಕೆ ಮುಗಿದ ಸಭೆ
ಕಾಂಗ್ರೆಸ್ ಶಾಸಕಾಂಗ ಸಭೆ ಕೇವಲ 20 ನಿಮಿಷಕ್ಕೆ ಮುಕ್ತಾಯವಾಯಿತು. ಶನಿವಾರ ಮಧ್ಯಾಹ್ನ 12:30ಕ್ಕೆ ನೂತನ ಸರ್ಕಾರದ ಪದಗ್ರಹಣ ಸಮಾರಂಭ ನಡೆಯಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!