ಬೆಳಗಾವಿ : ಇಲ್ಲಿನ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರಿಗೆ ಕೊರೋನಾದ ಲಕ್ಷಣಗಳು ಕಾಣಿಸಿದ್ದರಿಂದ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.
ಕಳೆದ ಶನಿವಾರ ಅವರಿಗೆ ಸ್ವಲ್ಪಮಟ್ಟಿಗೆ ಅನಾರೋಗ್ಯ ಕಾಣಿಸಿಕೊಂಡಾಗ ಗಂಟಲು ದ್ರವವನ್ನು ತಪಾಸಣೆಗೆ ಕಳುಹಿಸಿ ಕೊಡಲಾಗಿದೆ.ಅಂದಿನಿಂದಲೇ ಅವರು ಮನೆಯ ಒಂದು ಕೊಠಡಿಯಲ್ಲೇ ವಾಸ್ತವ್ಯ ಮಾಡಿದರು. ಸೋಮವಾರ ಅವರ ಗಂಟಲು ದ್ರವ ಪರೀಕ್ಷೆಯ ವರದಿ ಬಂದಿದ್ದು, ಕೊರೋನಾ ಲಕ್ಷಣಗಳು ಕಾಣಿಸಿವೆ. ಹಾಗಾಗಿ ಅವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.