Saturday, March 25, 2023

Latest Posts

ಶಾಸಕ ಎನ್.ಮಹೇಶ್‌ಗೆ ಎದೆನೋವು: ಆಸ್ಪತ್ರೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್‌ಗೆ ಎದೆನೋವು ಕಾಣಿಸಿಕೊಂಡಿದ್ದು , ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ (Mysuru Private Hospital) ದಾಖಲಿಸಲಾಗಿದೆ.

ಎನ್.ಮಹೇಶ್‌ಗೆ ಆ್ಯಂಜಿಯೋಗ್ರಾಮ್ (Angiogram) ಮಾಡಲಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಸದ್ಯ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಶಾಸಕ ಎನ್.ಮಹೇಶ್ ಪುತ್ರ ಅರ್ಜುನ್ ಮಾತನಾಡಿದ್ದು, ನಮ್ಮ ತಂದೆ ಆರೋಗ್ಯವಾಗಿದ್ದಾರೆ. ಬೆಳಗ್ಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಬಂದೆವು. ವೈದ್ಯರು ಆ್ಯಂಜಿಯೋಗ್ರಾಮ್ ಮಾಡಿದ್ದು, ಯಾವುದೇ ಸಮಸ್ಯೆಯಿಲ್ಲ ಎಂದು ಹೇಳಿದ್ದಾರೆ. ಎರಡು ದಿನ ವಿಶ್ರಾಂತಿಗೆ ಸೂಚಿಸಿದ್ದಾರೆ, ಯಾವುದೇ ಆತಂಕವಿಲ್ಲ ಎಂದು ಹೇಳಿದ್ದಾರೆ.

ಶಾಸಕ ಎನ್.ಮಹೇಶ್ ಶನಿವಾರ ಕೆಪಿಸಿಸಿ ಅಧ್ಯಕ್ಷ ಆರ್. ಧ್ರುವನಾರಾಯಣ ಅವರ ಅಂತಿಮ ದರ್ಶನದಲ್ಲಿ ಭಾಗಿಯಾಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!