ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಸೋಮವಾರ ನಸುಕಿನ ಜಾವ ಎಲ್ಲರ ಕಣ್ಣು ತಪ್ಪಿಸಿ ಪರಾರಿಯಾಗಿರುವ ಘಟನೆ ನಡೆದಿದೆ.
ಇದರಿಂದ ಜಿಲ್ಲೆಯಲ್ಲಿ ಹೊಸ ಆತಂಕ ಶುರುವಾಗಿದೆ.
ಹೊರ ರಾಜ್ಯದಿಂದ ಬಂದಿದ್ದ ಚಿಕ್ಕಮಗಳೂರು ಮೂಲದ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆ ಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಈತನ ಕೊರೋನಾ ವರದಿ ನೆಗೆಟಿವ್ ಬಂದಿತ್ತು ಎನ್ನಲಾಗಿದೆ.
ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಓಡಿ ಹೋಗಿರುವುದು ಜಿಲ್ಲಾಡಳಿತಕ್ಕೆ ಹೊಸ ತಲೆನೋವು ತಂದಿಟ್ಟಿದೆ. ಕೊರೋನಾ ಚಿಕಿತ್ಸಾ ಆಸ್ಪತ್ರೆ ಯಿಂದ ವ್ಯಕ್ತಿ ಓಡಿ ಹೋಗಿರುವುದು ಆಸ್ಪತ್ರೆಗೆ ಒದಗಿಸಿರುವ ಭದ್ರತೆ ಬಗ್ಗೆ ಅನುಮಾನ ಮೂಡುವಂತೆ ಮಾಡಿದೆ.