Thursday, August 11, 2022

Latest Posts

ಶಿವಮೊಗ್ಗ | ಅಪ್ರಾಪ್ತ ಗರ್ಭಿಣಿಗೆ ಕೊರೋನಾ ದೃಢ!

ಶಿವಮೊಗ್ಗ: ಇಲ್ಲಿನ ಮೆಗ್ಗಾನ್ ಆಸ್ಪತ್ರೆಯ ಸಖಿ ವಿಭಾಗದಲ್ಲಿ ಆಪ್ತ ಸಮಾಲೋಚನೆ ಪಡೆಯುತ್ತಿದ್ದ 15 ವರ್ಷದ ಬಾಲಕಿಯಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಆಸ್ಪತ್ರೆ, ಪೊಲೀಸ್ ಹಾಗೂ ಇತರೆ ಸಿಬ್ಬಂದಿಗಳಲ್ಲಿಯೂ ಕ್ವಾರೆಂಟೈನ್ ಆತಂಕ ಶುರುವಾಗಿದೆ.
ಐದು ದಿನಗಳ ಹಿಂದೆ ಶಿಕಾರಿಪುರ ತಾಲೂಕಿನ ಗ್ರಾಮವೊಂದರಲ್ಲಿ ಬಾಲ್ಯ ವಿವಾಹ ನಡೆಯುತ್ತಿರುವ ಬಗ್ಗೆ ಶಿಶು ಅಧಿಕಾರಿಗಳಿಗೆ ಮಾಹಿತಿ ಬಂದಿತ್ತು. ಬಳಿಕ ಬಾಲಕಿಯನ್ನು ರಕ್ಷಿಸಿ ಕರೆತರಲಾಗಿತ್ತು. ಬಳಿಕ ಪರೀಕ್ಷೆ ನಡೆಸಿದಾಗ ಅವಳು 5 ತಿಂಗಳ ಗರ್ಭಿಣಿಯಾಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಸಖಿ ವಿಭಾಗಕ್ಕೆ ಕಳುಹಿಸಲಾಗಿತ್ತು.
ಅಪ್ರಾಪ್ತೆ ಗರ್ಭ ಧರಿಸಲು ಕಾರಣನಾದ ಆರೋಪಿಯನ್ನು ಠಾಣೆಗೆ ಕರೆಯಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದರು. ಈ ಎಲ್ಲಾ ಘಟನಾವಳಿಗಳ ಬಳಿಕ ಪ್ರಕರಣದ ತನಿಖೆ ನಡೆಸಿದ್ದ ಕೆಲ ಪೊಲೀಸ್ ಅಧಿಕಾರಿಗಳು ಇಲಾಖೆಯ ಸಭೆಯಲ್ಲೂ ಭಾಗವಹಿಸಿದ್ದರು. ಮೆಗ್ಗಾನ್ ಆಸ್ಪತ್ರೆಯ ಸಖಿ ವಿಭಾಗದಲ್ಲಿ ಅಪ್ರಾಪ್ತೆಗೆ ಆಪ್ತಸಮಾಲೋಚನೆ ನೀಡಲಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss