Sunday, June 26, 2022

Latest Posts

ಶಿವಮೊಗ್ಗ| ಎಂಪಿಎಂ ಕಾರ್ಖಾನೆಗೆ ನೀಡಿರುವ ಭೂಮಿ ವಾಪಸ್ ಪಡೆಯಲು ಒತ್ತಾಯ

ಶಿವಮೊಗ್ಗ: ಎಂಪಿಎಂ ಕಾರ್ಖಾನೆಗೆ ನೀಡಿದ್ದ 60 ಸಾವಿರ ಹೆಕ್ಟೇರ್ ಅರಣ್ಯ ಭೂಮಿಯನ್ನು ಸರ್ಕಾರ ಕೂಡಲೇ ವಾಪಾಸ್ ಪಡೆಯಬೇಕು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ಮನವಿ ಸಲ್ಲಿಸಿತು. ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆಗೆ ಪಶ್ಚಿಮಘಟ್ಟದಲ್ಲಿ ದಟ್ಟವಾಗಿ ಹಬ್ಬಿಕೊಂಡಿರುವ ಸುಮಾರು 75 ಸಾವಿರ ಹೆಕ್ಟೇರ್ ಅರಣ್ಯ ಭೂಮಿಯನ್ನು 40 ವರ್ಷಗಳ ಅವಧಿಗೆ ಲೀಸ್‍ಗೆ ನೀಡಲಾಗಿತ್ತು. ಕೆಲವು ವರ್ಷಗಳ ನಂತರ 15 ಸಾವಿರ ಹೆಕ್ಟೇರ್ ಪ್ರದೇಶವನ್ನು ಹಿಂಪಡೆದು 60 ಸಾವಿರ ಹೆಕ್ಟೇರ್ ಪ್ರದೇಶವನ್ನು ಲೀಸ್‍ನಲ್ಲಿ ಮುಂದುವರೆಸಲಾಗಿತ್ತು. ಅದು ಈಗ 2020ರ ಆಗಸ್ಟ್ ವೇಳೆಗೆ ಅಂತ್ಯವಾಗಲಿದೆ. ಹಾಗಾಗಿ ಸರ್ಕಾರ ಅದನ್ನು ವಾಪಾಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಈಗಾಗಲೇ ಮೈಸೂರು ಕಾಗದ ಕಾರ್ಖಾನೆ ಸ್ಥಗಿತಗೊಂಡಿದೆ. ಕಾರ್ಖಾನೆ ಮತ್ತೆ ಮುಂದುವರೆಯುವ ಲಕ್ಷಣ ಇಲ್ಲ. ಅರಣ್ಯ ಭೂಮಿಯ ಅವಶ್ಯಕತೆ ಕಾರ್ಖಾನೆಗೆ ಇರುವುದಿಲ್ಲ. ಅದನ್ನು ಖಾಸಗಿಯವರಿಗೆ ಮಾರಾಟ ಮಾಡಲು ಎಂಪಿಎಂ ಆಡಳಿತ ಮಂಡಳಿಗೆ ಅವಕಾಶ ಇಲ್ಲ. ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ಈ ಭೂಮಿಯನ್ನು ನೀಡುವಂತಿಲ್ಲ ಎಂದರು.
ಯಾವುದೇ ಕಾರಣಕ್ಕೂ ಮತ್ತೆ ಈ ಭೂಮಿಯನ್ನು ನೀಲಗಿರಿ, ಆಕೇಶಿಯಾ ತೋಪನ್ನಾಗಿ ಮಾಡಬಾರದು ಎಂದು ಒತ್ತಾಯಿಸಿದರು.
ಸಸ್ಯರಾಶಿ ಪ್ರಕೃತಿ
ಒಕ್ಕೂಟದ ಪ್ರಮುಖರಾದ ಕೆ.ಟಿ.ಗಂಗಾಧರ್, ಕೆ.ಪಿ.ಶ್ರೀಪಾಲ್, ಎಂ.ಗುರುಮೂರ್ತಿ, ರಾಜೇಂದ್ರ ಕಂಬಳಗೆರೆ, ನಾಗೇಶನ್, ಮಾಲತೇಶ್ ಬೊಮ್ಮನಕಟ್ಟೆ, ಆದರ್ಶ ಹುಂಚದಕಟ್ಟೆ, ಪ್ರಸನ್ನ ಹಿತ್ತಲಗದ್ದೆ, ಮಂಜುನಾಥ ನವಿಲೆ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss