ಶಿವಮೊಗ್ಗ| ಕೇಂದ್ರ ಸರ್ಕಾರ ಪ್ರಕಟಿಸಿರುವ ಕೃಷಿ ಉತ್ಪನ್ನಗಳ ಬೆಂಬಲ ಬೆಲೆ ವೈಜ್ಞಾನಿಕವಾಗಿಲ್ಲ: ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಎಚ್.ಆರ್. ಬಸವರಾಜಪ್ಪ

0
25

ಶಿವಮೊಗ್ಗ: ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನಲ್ಲಿ ಪ್ರಕಟಿಸಿರುವ ಕೃಷಿ ಉತ್ಪನ್ನ ಗಳ ಬೆಂಬಲ ಬೆಲೆ ವೈಜ್ಞಾನಿಕವಾಗಿಲ್ಲ. ಹೀಗಾಗಿ ಡಾ. ಸ್ವಾಮಿನಾಥನ್ ಆಯೋಗದ ವರದಿಯಂತೆ ಬೆಂಬಲ ಬೆಲೆ ನೀಡುವಂತೆ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ಒತ್ತಾಯಿಸಿದ್ದಾರೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ‌ ಅವರು, ಸರ್ಕಾರ ಶೇ.50 ರಿಂದ 83 ರಷ್ಟು ಹೆಚ್ಚಿನ ಲಾಭ ಕೊಡಲಾಗುತ್ತದೆ ಎಂದು ಹೇಳಲಾಗಿದೆ. ಆದರೆ ಕೃಷಿ ಬೆಲೆ ಆಯೋಗ ಶಿಫಾರಸ್ಸು ಮಾಡಿದಷ್ಟು ಬೆಂಬಲ ಬೆಲೆ ನೀಡಿಲ್ಲ ಎಂದು ದೂರಿದರು.

ಇದುವರೆಗೆ ಬೆಳೆ ದಾಸ್ತಾನು ಮಾಡಿ ಮಾರಾಟ ಮಾಡಲು ಕಾನೂನಿನಲ್ಲಿ ಅವಕಾಶ ಇರಲಿಲ್ಲ. ಈಗ ಆ‌ ಕಾನೂನು ತೆಗೆದು ಹಾಕಿ ದಲ್ಲಾಳಿಗಳಿಗೆ ಅನುಕೂಲ ಮಾಡಲಾಗಿದೆ. ಇದರಿಂದ ಬಹುರಾಷ್ಟ್ರೀಯ ಕಂಪನಿಗಳಿಗೆ ಅನುಕೂಲ ಮಾಡಿ ಕೊಡಲಾಗಿದೆ. ಈ ಕಾನೂನಿಂದ ಗ್ರಾಹಕರಿಗೆ ಹಾಗೂ ರೈತರಿಗೆ ಯಾವುದೇ ಅನುಕೂಲ ಆಗುವುದಿಲ್ಲ ಎಂದು ದೂರಿದರು.

ಈಗಾಗಲೇ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಇದೀಗ ಕೇಂದ್ರ ಸರ್ಕಾರ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದೆ. ಇದರಿಂದ ರೈತರು, ಜನಸಾಮಾನ್ಯರಿಗೆ ಹೊರೆಯಾಗಲಿದೆ. ದೇಶದಲ್ಲಿ ೨ ಕೋಟಿ ಉದ್ಯೋಗ ನಷ್ಟವಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here