Wednesday, August 10, 2022

Latest Posts

ಶಿವಮೊಗ್ಗ| ಕೊರೋನಾಗೆ ಚನ್ನಗಿರಿ ಮಹಿಳೆ ಬಲಿ!

ಶಿವಮೊಗ್ಗ: ನಗರದ ಕೋವಿಡ್ ೧೯ ಚಿಕಿತ್ಸಾ ಆಸ್ಪತ್ರೆ ಆಗಿರುವ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿಗೆ ಮೊದಲ ಸಾವು ಸಂಭವಿಸಿದೆ.
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ 70 ವರ್ಷದ ಮಹಿಳೆ ಮೂರು ದಿನಗಳ ಹಿಂದೆ ಮೆಗ್ಗಾನ್ ಆಸ್ಪತ್ರೆಗೆ ಬಂದು ದಾಖಲಾಗಿದ್ದರು. ಶ್ವಾಸಕೋಶ ಸಮಸ್ಯೆ ಹಾಗೂ ಮೂಲವ್ಯಾಧಿಯಿಂದ ಇವರು ಬಳಲುತ್ತಿದ್ದರು ಎನ್ನಲಾಗಿದೆ.
ಬಳಿಕ ಅವರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆದರೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ. ಬುಧವಾರ ಬೆಳಿಗ್ಗೆ ಇವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.
ಮಹಿಳೆ ಪುತ್ರನನ್ನು ಹೊಂದಿದ್ದು, ಆತನನ್ನು ಕೂಡ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss