ಹೊಸ ದಿಗಂತ ವರದಿ, ಶಿವಮೊಗ್ಗ:
ಜಿಲ್ಲೆಯಲ್ಲಿ ಗುರುವಾರ 12 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 9 ಜನರನ್ನು ಬಿಡುಗಡೆ ಮಾಡಲಾಗಿದೆ.
ಶಿವಮೊಗ್ಗ ತಾಲೂಕಿನಲ್ಲಿ 04, ಭದ್ರಾವತಿ 01, ಶಿಕಾರಿಪುರ 01, ಸಾಗರ 01, ತೀರ್ಥಹಳ್ಳಿ 01, ಸೊರಬ 01, ಹೊಸನಗರ 01 ಹಾಗೂ ಹೊರ ಜಿಲ್ಲೆಯ 02 ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ 105 ಸಕ್ರಿಯ ಪ್ರಕರಣಗಳಿವೆ. 1653 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 36 ಜನ, ಖಾಸಗಿ ಆಸ್ಪತ್ರೆಯಲ್ಲಿ 4 ಜನ ಚಿಕಿತ್ಸೆ ಪಡೆಯುತ್ತಿದ್ದು,
72 ಜನ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.