ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ವ್ಯಾಪಕ ಮಳೆ ಬೀಳುತ್ತಿರುವುದರಿಂದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಗುರುವಾರ ಸಂಜೆ ಪೊಲೀಸ್ ವರಿಷ್ಠಾಧಿಕಾರಿ, ಶಿವಮೊಗ್ಗ ತಹಸಿಲ್ದಾರ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಶಿವಮೊಗ್ಗ ನಗರದ ತುಂಗಾ ನದಿ ದಂಡೆಯಲ್ಲಿರುವ ಪ್ರದೇಶಗಳಿಗೆ ಭೇಟಿ ನೀಡಿದರು.
ಬೆಕ್ಕಿನ ಕಲ್ಮಠ ಸಮೀಪದ ಮಂಟಪ ಇರುವ ಜಾಗ, ರಾಮಣ್ಣ ಶೆಟ್ಟಿ ಪಾರ್ಕ್ ಸಮೀಪದ ಸೀಗೆಹಟ್ಟಿ , ಕೊಪ್ಪಲ್ ಅಯ್ಯನಕೆರೆ, ಕುಂಬಾರ ಗುಂಡಿ, ಬಿಬಿ ಸ್ಟ್ರೀಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಗಾಜನೂರು ಸಮೀಪದ ತುಂಗಾ ಡ್ಯಾಮ್ ಗೆ ಭೇಟಿ ನೀಡಿ ನೀರಿನ ಒಳ ಹರಿವು ಮತ್ತು ಹೊರ ಹರಿವು ಕುರಿತು ಅಲ್ಲಿನ ಅಧಿಕಾರಿಗಳೊಂದಿಗೆ ಚರ್ಚಿಸಿ, ನೀರಿನ ಮಟ್ಟದ ಬಗ್ಗೆ ನಿರಂತರ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.