ಶಿವಮೊಗ್ಗ: ಜಿಲ್ಲೆಯಲ್ಲಿ ಬುಧವಾರ 47 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 37 ಜನರನ್ನು ಬಿಡುಗಡೆ ಮಾಡಲಾಗಿದೆ.
ಶಿವಮೊಗ್ಗ ತಾಲೂಕಿನಲ್ಲಿ 20, ಭದ್ರಾವತಿ 6, ಶಿಕಾರಿಪುರ 2, ಸಾಗರ 5, ತೀರ್ಥಹಳ್ಳಿ 4, ಸೊರಬ 8, ಹೊಸನಗರ 2 ಪ್ರಕರಣಗಳು ದಾಖಲಾಗಿದ್ದು, ಜಿಲ್ಲೆಯಲ್ಲಿ 471 ಸಕ್ರಿಯ ಪ್ರಕರಣಗಳಿವೆ.
2588 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 68 ಜನ, ಖಾಸಗಿ ಆಸ್ಪತ್ರೆಯಲ್ಲಿ 67 ಜನ ಚಿಕಿತ್ಸೆ ಪಡೆಯುತ್ತಿದ್ದರೆ, ಕೋವಿಡ್ ಕೇರ್ ಸೆಂಟರ್ ನಲ್ಲಿ ಒಬ್ಬರು ದಾಖಲಾಗಿದ್ದಾರೆ.
322 ಜನ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.