ಶಿವಮೊಗ್ಗ: ಜಿಲ್ಲೆಯಲ್ಲಿ ಭಾನುವಾರ ಮತ್ತೊಂದು ಕೊರೋನಾ ಪ್ರಕರಣ ಪತ್ತೆಯಾಗಿದೆ. 6 ವರ್ಷದ ಬಾಲಕಿಯಲ್ಲಿ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಪಿ-3194 ಕ್ರಮ ಸಂಖ್ಯೆ ನೀಡಲಾಗಿದೆ.
ಬಾಲಕಿ ಕುಟುಂಬ ಕತಾರ್ ನಿಂದ ಆಗಮಿಸಿ ಬೆಂಗಳೂರಿನಲ್ಲಿ ಕೊರೋನಾ ಪರೀಕ್ಷೆ ಗೆ ಒಳಗಾಗಿದ್ದರು. ಬಳಿಕ ಶಿವಮೊಗ್ಗ ಬಂದು ಕ್ವಾರಂಟೈನ್ ನಲ್ಲಿದ್ದರು ಎನ್ನಲಾಗಿದೆ. ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 42ಕ್ಕೆ ಏರಿದೆ. ಕೊರೋನಾ ಸೋಂಕಿತ 24 ಜನರನ್ನು ಬಿಡುಗಡೆ ಮಾಡಲಾಗಿದ್ದು, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳು 18 ಇವೆ.