Thursday, August 11, 2022

Latest Posts

ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ 175 ಮಂದಿಗೆ ಕೊರೋನಾ ಸೋಂಕು ದೃಢ, 352 ಮಂದಿ ಗುಣಮುಖ

ಶಿವಮೊಗ್ಗ: ಜಿಲ್ಲೆಯಲ್ಲಿ ಭಾನುವಾರ ಕೊರೋನ ಸೋಂಕಿತರಿಗಿಂತ ಎರಡುಪಟ್ಟು ಹೆಚ್ಚು ಸಂಖ್ಯೆಯಲ್ಲಿ ಗುಣಮುಖರಾಗಿ ಹೊರಬಂದಿದ್ದಾರೆ. ಭಾನುವಾರ ಒಟ್ಟು 175 ಮಂದಿಗೆ ಸೋಂಕು ತಗುಲಿದೆ. ಬರೋಬ್ಬರಿ 352 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಇನ್ನು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5828 ಕ್ಕೆ ಏರಿಕೆ ಆಗಿದ್ದರೆ, ಈವರೆಗೆ ಬಿಡುಗಡೆ ಆದವರ ಸಂಖ್ಯೆ 3626 ಆಗಿದೆ. 2105 ಸಕ್ರಿಯ ಪ್ರಕರಣಗಳಿವೆ. ಭಾನುವಾರ ಮತ್ತೆ ನಾಲ್ಕು ಮಂದಿ ಮೃತಪಟ್ಟಿದ್ದು, ಈವರೆಗೆ 97 ಮಂದಿ ಕೊರೋನಾ ಸೋಂಕಿಗೆ ಬಲಿಯಾದಂತಾಗಿದೆ.
ಶಿವಮೊಗ್ಗ ತಾಲೂಕಿನಲ್ಲಿ 55, ಭದ್ರಾವತಿ ಮತ್ತು ಶಿಕಾರಿಪುರ-ತಲಾ 57, ಸೊರಬ-04 ಹಾಗೂ ತೀರ್ಥಹಳ್ಳಿ ತಾಲೂಕಿನಲ್ಲಿ ಓರ್ವರಿಗೆ ಸೋಂಕು ತಗುಲಿದೆ. ಕೋವಿಡ್ ಕೇರ್ ಸೆಂಟರ್ ನಲ್ಲಿ 786 ಮಂದಿ, ಖಾಸಗಿ ಆಸ್ಪತ್ರೆಯಲ್ಲಿ 267 ಹಾಗೂ ಮನೆಯಲ್ಲಿ 765 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss