ಶಿವಮೊಗ್ಗ: ಇಲ್ಲಿನ ಮಹಾನಗರ ಪಾಲಿಕೆ ಆಯುಕ್ತರಿಗೂ ಕೊರೋನಾ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಪ್ರಭಾರ ಆಯುಕ್ತರನ್ನು ನಿಯೋಜಿಸಲಾಗಿದೆ.
ಕಳೆದ ವಾರವೇ ಪಾಲಿಕೆ ಲೆಕ್ಕ ಪತ್ರ ವಿಭಾಗದ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ ಪಾಲಿಕೆ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿತ್ತು. ನಂತರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಕ್ವಾರಂಟೈನ್ ಗೆ ಒಳಗಾಗಿದ್ದರು. ಬಳಿಕ ಸೋಂಕು ಲಕ್ಷಣಗಳು ಕಾಣಿಸಿದ ಹಿನ್ನೆಲೆಯಲ್ಲಿ ತಪಾಸಣೆ ಮಾಡಿಸಿಕೊಂಡಿದ್ದರು. ಇದೀಗ ಸೋಂಕು ದೃಢಪಟ್ಟಿದೆ.
ಹಾಗಾಗಿ ಪಾಲಿಕೆ ಉಪ ಆಯುಕ್ತ( ಆಡಳಿತ) ಪ್ರಮೋದ್ ಅವರನ್ನು ಪ್ರಭಾರ ಆಯುಕ್ತರಾಗಿ ನಿಯೋಜಿಸಲಾಗಿದೆ.