ಶಿವಮೊಗ್ಗ :ಜಿಲ್ಲೆಯಲ್ಲಿ ಶನಿವಾರ 327 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4084 ಕ್ಕೆ ಏರಿಕೆಯಾಗಿದ್ದು, ಸೋಂಕಿತರ ಪ್ರಮಾಣ ಹೆಚ್ಚುತ್ತಿರುವುದು ಜನತೆಯಲ್ಲಿ ತೀವ್ರ ಆತಂಕ ಉಂಟು ಮಾಡಿದೆ.
ಗುಣಮುಖರಾದ 107 ಜನರನ್ನು ಬಿಡುಗಡೆ ಮಾಡಲಾಗಿದ್ದು, ಇದುವರೆಗೆ 2538 ಜನರನ್ನು ಬಿಡುಗಡೆ ಮಾಡಲಾಗಿದೆ. 1475 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ.
ಸೋಂಕಿತ ಮೂವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 71 ಕ್ಕೆ ಏರಿಕೆಯಾಗಿದೆ.1701 ಕಂಟೈನ್ಮೆಂಟ್ ಜೋನ್ ಮಾಡಲಾಗಿದೆ.