Saturday, January 23, 2021

Latest Posts

ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ 29 ಜನರಲ್ಲಿ ಕೊರೋನಾ ಸೋಂಕು ದೃಢ, 34 ಮಂದಿ ಗುಣಮುಖ

ಹೊಸ ದಿಗಂತ ವರದಿ, ಶಿವಮೊಗ್ಗ:

ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ 29 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 34 ಜನರನ್ನು ಬಿಡುಗಡೆ ಮಾಡಲಾಗಿದೆ.
ಸೋಂಕಿತ ಒಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 348 ಕ್ಕೆ ಏರಿಕೆಯಾಗಿದೆ.
ಶಿವಮೊಗ್ಗ ತಾಲೂಕಿನಲ್ಲಿ 8, ಭದ್ರಾವತಿ 14, ಶಿಕಾರಿಪುರ 00, ಸಾಗರ 2, ತೀರ್ಥಹಳ್ಳಿ 1, ಸೊರಬ 3, ಹೊಸನಗರ 00, ಹೊರಜಿಲ್ಲೆಯ 1 ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ 171 ಸಕ್ರಿಯ ಪ್ರಕರಣಗಳಿವೆ.
3660 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 56 ಜನ, ಖಾಸಗಿ ಆಸ್ಪತ್ರೆಯಲ್ಲಿ 14 ಜನ ಚಿಕಿತ್ಸೆ ಪಡೆಯುತ್ತಿದ್ದು, 101 ಜನ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!