Wednesday, August 17, 2022

Latest Posts

ಶಿವಮೊಗ್ಗ ಜಿಲ್ಲೆಯಲ್ಲಿ ಸೋಮವಾರ 241 ಜನರಲ್ಲಿ ಕೊರೋನಾ ಸೋಂಕು ಪತ್ತೆ, 210 ಮಂದಿ ಗುಣಮುಖ

ಶಿವಮೊಗ್ಗ: ಜಿಲ್ಲೆಯಲ್ಲಿ ಸೋಮವಾರ 241 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಗುಣಮುಖರಾದ 210 ಜನರನ್ನು ಬಿಡುಗಡೆ ಮಾಡಲಾಗಿದೆ.
ಸೋಂಕಿತ 6 ಜನರು ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 283 ಕ್ಕೆ ಏರಿಕೆಯಾಗಿದೆ. 1864 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ.
ಶಿವಮೊಗ್ಗ ತಾಲೂಕಿನಲ್ಲಿ 74, ಭದ್ರಾವತಿ 53, ಶಿಕಾರಿಪುರ 30, ಸಾಗರದಲ್ಲಿ 47, ತೀರ್ಥಹಳ್ಳಿ 12, ಸೊರಬ 13, ಹೊಸನಗರ 7 ಪ್ರಕರಣಗಳಿದ್ದು, ಹೊರ ಜಿಲ್ಲೆಯ 5 ಪ್ರಕರಣಗಳು ದಾಖಲಾಗಿವೆ.
ಸೋಮವಾರ 2890 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಕೋವಿಡ್ ಆಸ್ಪತ್ರೆಯಲ್ಲಿ 157 ಜನ, ಖಾಸಗಿ ಆಸ್ಪತ್ರೆಯಲ್ಲಿ 283 ಜನ ಚಿಕಿತ್ಸೆ ಪಡೆಯುತ್ತಿದ್ದರೆ, 1237 ಜನ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!