Sunday, March 7, 2021

Latest Posts

ಶಿವಮೊಗ್ಗ ಜಿಲ್ಲೆಯಲ್ಲಿ 10 ಜನರಲ್ಲಿ ಕೊರೋನಾ ಸೋಂಕು ದೃಢ

 ಹೊಸದಿಗಂತ ವರದಿ, ಶಿವಮೊಗ್ಗ: 

ಜಿಲ್ಲೆಯಲ್ಲಿ ಮಂಗಳವಾರ 10 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ  10ಜನರನ್ನು ಬಿಡುಗಡೆ ಮಾಡಲಾಗಿದೆ.
ಶಿವಮೊಗ್ಗ ತಾಲೂಕಿನಲ್ಲಿ  ಮಾತ್ರ10  ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ 54 ಸಕ್ರಿಯ ಪ್ರಕರಣಗಳಿವೆ.
1792 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 24 ಜನ, ಖಾಸಗಿ ಆಸ್ಪತ್ರೆಯಲ್ಲಿ 14
ಜನ ಚಿಕಿತ್ಸೆ ಪಡೆಯುತ್ತಿದ್ದು,
16 ಜನ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.
ಗೋಪಾಳದ ಮಾನಸಧಾರ ಕೇಂದ್ರ ಒಂದರಲ್ಕೇ 08 ಮಂದಿಯಲ್ಲಿ ಸೋಂಕು ಕಾಣಿಸಿದೆ. ಕೇಂದ್ರವನ್ನು ಕಂಟೋನ್ಮೆಂಟ್ ವಲಯ ಎಂದು ಘೋಷಿಸಲಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss