Thursday, July 7, 2022

Latest Posts

ಶಿವಮೊಗ್ಗ ಜಿಲ್ಲೆಯಲ್ಲಿ 23 ಜನರಲ್ಲಿ ಕೊರೋನಾ ಸೋಂಕು ದೃಢ: 18 ಮಂದಿ ಗುಣಮುಖ

ಹೊಸ ದಿಗಂತ ವರದಿ, ಶಿವಮೊಗ್ಗ:

ಶಿವಮೊಗ್ಗ ಜಿಲ್ಲೆಯಲ್ಲಿ ಶನಿವಾರ 23 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 18 ಜನರನ್ನು ಬಿಡುಗಡೆ ಮಾಡಲಾಗಿದೆ.
ಶಿವಮೊಗ್ಗ ತಾಲೂಕಿನಲ್ಲಿ 2, ಭದ್ರಾವತಿ 8, ಶಿಕಾರಿಪುರ 2, ಸಾಗರ 7, ತೀರ್ಥಹಳ್ಳಿ 1, ಸೊರಬ 00, ಹೊಸನಗರ 3 ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ 176 ಸಕ್ರಿಯ ಪ್ರಕರಣಗಳಿವೆ.
2788 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 72 ಜನ, ಖಾಸಗಿ ಆಸ್ಪತ್ರೆಯಲ್ಲಿ 12 ಜನ ಚಿಕಿತ್ಸೆ ಪಡೆಯುತ್ತಿದ್ದು,92 ಜನ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss