spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಶಿವಮೊಗ್ಗ| ಪಕ್ಷದ ಶಿಸ್ತು ಉಲ್ಲಂಘಿಸಿದರೆ ಕ್ರಮ ಜರುಗಿಸಲು ಆಯನೂರು ಮಂಜುನಾಥ್ ಒತ್ತಾಯ

- Advertisement -Nitte

ಶಿವಮೊಗ್ಗ : ಪಕ್ಷದ ಶಿಸ್ತು ಉಲ್ಲಂಘನೆ ಮಾಡುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮುಖಂಡ ಹಾಗೂ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಮುಖ್ಯಮಂತ್ರಿ ಯಡಿಯೂರಪ್ಪ ಕುರಿತು ನೀಡಿರುವ ಹೇಳಿಕೆ ಖಂಡನೀಯ. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಈ ಕೂಡಲೇ ಯತ್ನಾಳ್ ಗೆ ನೋಟಿಸ್ ನೀಡಬೇಕು ಎಂದು ಆಗ್ರಹಿಸಿದರು.
ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ಬಿ.ಎಸ್. ಯಡಿಯೂರಪ್ಪ ಅತ್ಯುತ್ತಮವಾಗಿ ಆಡಳಿತ ನೀಡುತ್ತಿದ್ದಾರೆ. ಕೋವಿಡ್- 19 ನಿಯಂತ್ರಣದಲ್ಲಿ ದೇಶದಲ್ಲೇ ಕರ್ನಾಟಕ ಅತ್ಯುತ್ತಮವಾಗಿ ನಿರ್ವಹಣೆ ಮಾಡುತ್ತಿದೆ ಎಂದು ಹೆಗ್ಗಳಿಕೆಗೆ ಪಾತ್ರವಾಗಿದೆ. ಬಿ.ಎಸ್. ಯಡಿಯೂರಪ್ಪ ಅವರು 78ರ ಹರೆಯದಲ್ಲೂ ರಾಜ್ಯದ ಜನತೆಗೆ ನೆಮ್ಮದಿ ತರುವಂತಹ ಆಡಳಿತ ನೀಡುತ್ತಿದ್ದಾರೆ ಎಂದು ಹೇಳಿದರು.
ಈ ನಡುವೆ ಯತ್ನಾಳ್ ಅವರು ಹೇಳಿಕೆ ನೀಡಿ ಬಿ.ಎಸ್. ಯಡಿಯೂರಪ್ಪ ಕೇವಲ ಮುಖ್ಯಮಂತ್ರಿ ಮಾತ್ರ. ನನಗೆ ನಾಯಕರಲ್ಲ ಎಂದು ಉದ್ಧಟತನದ ಹೇಳಿಕೆ ನೀಡಿದ್ದಾರೆ. ಪ್ರಚಾರಕ್ಕಾಗಿ ಇಂತಹ ಹೇಳಿಕೆ ನೀಡುವುದು ಖಂಡನೀಯ ಎಂದು ಬೇಸರ ವ್ಯಕ್ತಪಡಿಸಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss