ಶಿವಮೊಗ್ಗ: ಕಳೆದ 10 ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಸಗುತ್ತಿರುವುದನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಜಿಲ್ಲಾಧಿಕಾರಿ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಿದರು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಕಡಿಮೆಯಾಗಿ ದ್ದರೂ ಕೂಡ ಕೇಂದ್ರ ಸರ್ಕಾರ ಎಕ್ಸೈಜ್ ಶುಲ್ಕ ಹೆಚ್ಚಿಸಿ ಜನರ ಮೇಲೆ ಹೊರೆ ಮಾಡಿರುವುದು ಖಂಡನೀಯವೆಂದು ಹೇಳಿದ್ದಾರೆ.
ಲಾಕ್ ಡೌನ್ ನಿಂದ ತತ್ತರಿಸಿರುವ ಜನರ ಮೇಲೆ ಗಾಯದ ಮೇಲೆ ಬರೆ ಎಳೆದಂತೆ ಮಾಡಲಾಗಿದೆ. ಕಳೆದ 10 ದಿನಗಳಿಂದ ನಿರಂತರವಾಗಿ ಬೆಲೆ ಹೆಚ್ಚಳ ಮಾಡುತಗತಿರುವುದರಿಂದ ಈಗ ಪೆಟ್ರೋಲ್ ಬೆಲೆ 80 ರ ಗಡಿ ದಾಟಿದೆ. ಡೀಸೆಲ್ ಕೂಡ 70 ರ ಗಡಿ ದಾಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂಧನ ಬೆಲೆ ಹೆಚ್ಚಳದಿಂದ ಇತರೆ ವಸ್ತುಗಳ ಬೆಲೆ ಕೂಡ ಜಾಸ್ತಿಯಾಗಿ ಜನಜೀವನ ಕಠಿಣವಾಗಲಿದೆ.ಹೀಹಾಗಿ ಇಂಧನದ ಮೇಲಿನ ತೆರಿಗೆ ಕಡಿಮೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಎಂ. ಪ್ರವೀಣ್ ಕುಮಾರ್, ಗಿರೀಶ್ ಡಿ ಆರ್.,ಕೆ.ರಂಗನಾಥ, ಆರ್. ಕಿರಣ್ ಮೊದಲಾದವರು ಇದ್ದರು.