Sunday, June 26, 2022

Latest Posts

ಶಿವಮೊಗ್ಗ| ಪ್ರಶ್ನೆಪತ್ರಿಕೆ ಸೋರಿಕೆ: ಉನ್ನತ ತನಿಖೆಗೆ ಎಬಿವಿಪಿ ಆಗ್ರಹ

ಹೊಸ ದಿಗಂತ ವರದಿ, ಶಿವಮೊಗ್ಗ:

ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕ ಹುದ್ದೆ ನೇಮಕಾತಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವುದರ ಉನ್ನತ ತನಿಖೆಗೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಪ್ರಶ್ನೆ ಪತ್ರಿಕೆಳು ಸೋರಿಕೆ ಆಗಿರುವುದು ಇದೇ ವೊದಲೇನಲ್ಲ. ಹಲವು ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುವುದು ಮತ್ತು ಭ್ರಷ್ಟಾಚಾರ ನಡೆಯುವುದು ಸಾಮಾನ್ಯವಾಗಿದೆ. ಇತ್ತೀಚೆಗೆ ಒಂದೇ ತಾಲ್ಲೂಕಿನ ಒಂದೇ ಪರೀಕ್ಷಾ ಕೇಂದ್ರದಿಂದ ಎಸ್‌ಡಿಎ ಪರೀಕ್ಷೆಯಲ್ಲಿ ಅತಿಹೆಚ್ಚು ಅಭ್ಯರ್ಥಿಗಳು ಆಯ್ಕೆಯಾಗಿರುವುದು ವರದಿಯಾಗಿದೆ. ರಾಜ್ಯದಲ್ಲಿ ಇಂತಹ ಅಕ್ರಮ ಮತ್ತು ಭ್ರಷ್ಟಾಚಾರ ಕೆಪಿಎಸ್ಸಿಯಲ್ಲಿ ಮೇಲಿಂದ ಮೇಲೆ ನಡೆಯುತಿ್ತದ್ದರೂ ಕಡಿವಾಣ ಹಾಕುವಲ್ಲಿ ಕೆಪಿಎಸ್ಸಿ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss