ಹೊಸ ದಿಗಂತ ವರದಿ, ಶಿವಮೊಗ್ಗ:
ಶಿವಮೊಗ್ಗ ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾರಂದೂರಿನಿಂದ ಕೆಂಪೇಗೌಡ ನಗರ ಕಡೆ ಹೋಗುವ ಬೈಪಾಸ್ ರಸ್ತೆಯ ಹತ್ತಿರ ಇಸ್ಪೀಟು ಜೂಜಾಟ ಆಡುತ್ತಿದ್ದ ಐದು ಮಂದಿಯನ್ನು ಪೊಲೀಸರು ಬಂಧಿಸಿ 31,500 ರೂ. ನಗದು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಭದ್ರಾವತಿ ಡಿವೈಎಸ್ಪಿ ಕೃಷ್ಣಮೂರ್ತಿ ಮಾರ್ಗದರ್ಶನದಲ್ಲಿ, ಮಂಜುನಾಥ್, ಪೊಲೀಸ್ ನಿರೀಕ್ಷಕರು, ಭದ್ರಾವತಿ ಗ್ರಾಮಾಂತರ ವೃತ್ತ, ಸಿಬ್ಬಂದಿಗಳಾದ ಬಸವರಾಜ , ಮಧು , ಮಂಜುನಾಥ್, ರಾಜಣ್ಣ ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.
ಆರೋಪಿತರ ವಿರುದ್ಧ ಅಕ್ರಮ ಜೂಜಾಟ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧೀಕ್ಷಕ ಕೆ.ಎಂ ಶಾಂತರಾಜು ತಿಳಿಸಿದ್ದಾರೆ.