Saturday, August 13, 2022

Latest Posts

ಶಿವಮೊಗ್ಗ | ಮಂಗಳವಾರ ಮೂರು ವರ್ಷದ ಬಾಲಕ ಸೇರಿದಂತೆ ಮತ್ತೆ 7 ಜನರಲ್ಲಿ ಕೊರೋನಾ, ಶತಕದ ಗಡಿ ದಾಟಿದ ಸೋಂಕಿತರ ಸಂಖ್ಯೆ

ಶಿವಮೊಗ್ಗ: ಜಿಲ್ಲೆಯಲ್ಲಿ ಮಂಗಳವಾರ ಮತ್ತೆ 7 ಜನರಲ್ಲಿ ಕೊರೋನಾ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿದೆ.  ಮಂಗಳವಾರ ಮೂರು ವರ್ಷದ ಬಾಲಕ ಸೇರಿ ಒಟ್ಟು ಏಳು ಮಂದಿಯಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಇದರಲ್ಲಿ ಐವರು ಮಹಾರಾಷ್ಟ್ರ ರಾಜ್ಯದಿಂದ ಹಿಂತಿರುಗಿದವರಾಗಿದ್ದರೆ. ಇಬ್ಬರಿಗೆ ಪಿ-6149ರ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗುಲಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತ ಸಂಖ್ಯೆ 101ಕ್ಕೆ ಏರಿದೆ. ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳ ಆಗುತ್ತಿರುವುದು ಜಿಲ್ಲೆಯಲ್ಲಿ ಆತಂಕ ಮೂಡಿಸಿದೆ.
ಮೂವರು ಐಸಿಯುನಲ್ಲಿ
ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರನ್ನು ಮೆಗ್ಗಾನ್ ಆಸ್ಪತ್ರೆಯ ಕೋವಿಡ್ ವಾರ್ಡ್‌ನ ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು ಮೂವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೆಲ್ತ್ ಬುಲೆಟಿನ್ ತಿಳಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss